ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ವಿದ್ಯಾರ್ಥಿಗಳು ಬಹು ದಿನಗಳಿಂದ ಕಾಯುತ್ತಿದ್ದ ಫಲಿತಾಂಶ ಪ್ರಕಟವಾಗಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಫಲಿತಾಂಶವನ್ನು ಪ್ರಕಟಿಸಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀಯವರು ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇವರ ಜೊತೆಗೆ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾರ್ ಸಿಂಗ್ ಜೊತೆಯಾಗಿ ಪತ್ರಿಕಾಗೋಷ್ಠಿ ನಡೆಸಿ ರಿಸಲ್ಟ್ ಅನೌನ್ಸ್ ಮಾಡಿದ್ದಾರೆ.
ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ದಿನಾಂಕ 25.03.2024 ರಿಂದ 06.04.2024 ರವರೆಗೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ಹೊರಬಿದ್ದ ಫಲಿತಾಂಶದಂತೆ ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ.
ಫಲಿತಾಂಶವನ್ನು ನೋಡೋದು ಹೇಗೆ?
sslc.karnataka.gov.in
kseab.karnataka.gov.in
ಮೇಲಿನ ವೆಬ್ಸೈಟ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪರಿಶೀಲಿಸಬಹುದಾಗಿದೆ. ಇವು ಮೂರು ಸರ್ಕಾರಿ ವೆಬ್ಸೈಟ್ಗಳಾಗಿವೆ.