ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರವಾರ, ಮಂಗಳೂರುಗಳಲ್ಲಿ ಕಡಲ ಕೊರತೆವಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣ ಇದೆ. ಕಡಲ್ಕೊರೆತದ ಬಗ್ಗೆ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ವಹಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರೇ ಸ್ಥಳಕ್ಕೆ ಹೋಗಿ ಪರಿಶೀಲಿಸಲು ಸೂಚಿಸಿದ್ದೇನೆ ಎಂದು ಹೇಳಿದರು.
ಈಗಾಗಲೇ ಕಂದಾಯ ಸಚಿವರು ಕೊಡಗಿನಲ್ಲಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 3-4 ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಕೆರೂರು ಪಟ್ಟಣದಲ್ಲಿ ನಡೆದ ಗಲಾಟೆಯನ್ನು ಪೊಲೀಸರು ಕೂಡಲೇ ನಿಯಂತ್ರಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಬಂಧಿಸಲಾಗಿದೆ. ಸದ್ಯ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 2 ಸಮುದಾಯಗಳನ್ನು ಶಾಂತವಾಗಿರುವಂತೆ ಸೂಚನೆ ನೀಡಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ ಎಂದರು.