Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಕಡಲ್ಕೊರೆತಕ್ಕೀಡಾದ ಪ್ರದೇಶಕ್ಕೆ ಕಂದಾಯ ಸಚಿವ ಆರ್‌. ಅಶೋಕ್‌ ಭೇಟಿ
    ಇತ್ತೀಚಿನ ಸುದ್ದಿ

    ಉಳ್ಳಾಲ: ಕಡಲ್ಕೊರೆತಕ್ಕೀಡಾದ ಪ್ರದೇಶಕ್ಕೆ ಕಂದಾಯ ಸಚಿವ ಆರ್‌. ಅಶೋಕ್‌ ಭೇಟಿ

    July 8, 2022
    Share

    ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿ ಮತ್ತು ಉಳ್ಳಾಲದ ಸೀಗ್ರೌಂಡ್‌ನ‌ಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸ್ಥಳೀಯರಿಂದ ಅಹವಾಲು ಬಂದಿದ್ದು, ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ತಜ್ಞರ ಸಮಿತಿಯೊಂದಿಗೆ ಸಮೀಕ್ಷೆ ನಡೆಸಿ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದರು.

    ಅವರು ಕಡಲ್ಕೊರೆತಕ್ಕೀಡಾದ ತಾಲೂಕಿನ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್‌ ಹಾಗೂ ಮೊಗವೀರಪಟ್ಣ ಪ್ರದೇಶಕ್ಕೆ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಹಾಗೂ ಬಂದರು ಸಚಿವ ಅಂಗಾರ ಜತೆ ಭೇಟಿ ನೀಡಿ ಸ್ಥಳೀಯರ ಅಹವಾಲು ಸ್ವೀಕರಿಸಿ ಮಾತನಾಡಿದರು.

    ರಾಜ್ಯ ಸರಕಾರ ತಮ್ಮ ಪಕ್ಷದ ಶಾಸಕರು ಆಡಳಿತವಲ್ಲದ ಪ್ರದೇಶಕ್ಕೂ ಭೇಟಿ ನೀಡಿ ಹಾನಿಗೊಳಗಾದಂತಹ ಮನೆಮಂದಿಗೆ ಸಹಾಯವನ್ನು ಮಾಡುತ್ತಿದೆ, ಕಳೆದ 60 ವರ್ಷದಿಂದ ಕಾಂಗ್ರೆಸ್‌ ಸರಕಾರವಿದ್ದಾಗಲೂ ಸಮುದ್ರವೂ ಇತ್ತು ಕೊರೆತವೂ ಇತ್ತು. ಅಷ್ಟೂ ವರ್ಷಗಳಲ್ಲಿ ಸರಿಪಡಿಸಲು ಸಾಧ್ಯವಾಗದವರು ಟೀಕೆ ಮಾಡುವುದು ಸರಿಯಲ್ಲ ಎಂದು ಶಾಸಕ ಯು.ಟಿ.ಖಾದರ್‌ ಟೀಕೆಗೆ ಪ್ರತಿಕ್ರಿಯೆ ನೀಡಿದರು.

    ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಮಾತನಾಡಿ ಮರವಂತೆ ಶೈಲಿಯಲ್ಲೇ ಕಡಲ್ಕೊರೆತ ತಡೆ ಬೇಲಿಯನ್ನು ರಚಿಸುವ ಯೋಜನೆ ರೂಪಿಸುತ್ತೇವೆ. ಪ್ರಾಥಮಿಕವಾಗಿ ತಜ್ಞರ ವರದಿಯನ್ನು ಪಡೆದುಕೊಂಡ ಬಳಿಕವಷ್ಟೇ ತೀರ್ಮಾನಕ್ಕೆ ಬರುತ್ತೇವೆ ಎಂದರು. ಸಚಿವ ಎಸ್‌. ಅಂಗಾರ, ಡಿಸಿ ಡಾ| ರಾಜೇಂದ್ರ ಕೆ.ವಿ., ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಉಪಸ್ಥಿತರಿದ್ದರು.

    Post Views: 212

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.