Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಪೊಲೀಸ್ ವಾಹನದ ವಿಡಿಯೋ ವೈರಲ್ ಮಾಡಿ ಎಡವಟ್ಟು ಮಾಡಿಕೊಂಡ ವ್ಯಕ್ತಿ – ದಂಡ ಸಹಿತ ಸ್ಪಷ್ಟನೆ ನೀಡಿದ ಕಮಿಷನರ್
    ಇತ್ತೀಚಿನ ಸುದ್ದಿ

    ಮಂಗಳೂರು : ಪೊಲೀಸ್ ವಾಹನದ ವಿಡಿಯೋ ವೈರಲ್ ಮಾಡಿ ಎಡವಟ್ಟು ಮಾಡಿಕೊಂಡ ವ್ಯಕ್ತಿ – ದಂಡ ಸಹಿತ ಸ್ಪಷ್ಟನೆ ನೀಡಿದ ಕಮಿಷನರ್

    May 17, 2024
    Share

    ಮಂಗಳೂರು : ಪೊಲೀಸ್ ವಾಹನವೊಂದರ ವಿಮೆ ಮುಕ್ತಾಯವಾಗಿದೆ ಎಂಬ ವಿಡಿಯೋ ಇಂದು ಬೆಳಗ್ಗಿನಿಂದ ಮಂಗಳೂರು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಪೊಲೀಸ್ ಕಮಿಷನರ್ ವಿಡಿಯೋ ಮಾಡಿದವನಿಗೆ ದಂಡದ ಬಿಸಿ ಮುಟ್ಟಿಸಿ, ವಿಮೆ ಮುಕ್ತಾಯವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮೇ 16ರಂದು ಸಂಜೆ ನಗರದ ಕುಂಟಿಕಾನ ಬಳಿ ಕೆಎ-19-ಜಿ-1023 ನೋಂದಣಿಯ ಹೆದ್ದಾರಿ ಗಸ್ತು ವಾಹನ ಕರ್ತವ್ಯದಲ್ಲಿತ್ತು. ಈ ವೇಳೆ ವ್ಯಕ್ತಿಯೋರ್ವನಿಗೆ ಟ್ರಾಫಿಕ್ ಪೊಲೀಸ್ ವಾಯುಮಾಲಿನ್ಯ ತಪಾಸಣಾ ಪತ್ರ ತೋರಿಸಿಲ್ಲ ಎಂದು ದಂಡ ವಿಧಿಸಿದ್ದರು. ಇದರಿಂದ ಕುಪಿತನಾದ ಆತ ಹೆದ್ದಾರಿ ಗಸ್ತು ವಾಹನದ ವಿಡಿಯೋ ಚಿತ್ರೀಕರಣ ಮಾಡಿ ಅದರ ವಿಮಾ ಅವಧಿಯು ಮುಕ್ತಾಯವಾಗಿದೆ. ಪೊಲೀಸ್ ಇಲಾಖೆ ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿದೆ ಎಂದು‌ ಸೋಶಿಯಲ್ ಮೀಡಿಯಾಗಳಲ್ಲಿ ವಿಡಿಯೋ ವೈರಲ್ ಮಾಡಿದ್ದಾನೆ. ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಇದು ತಪ್ಪು ಮಾಹಿತಿ, ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳು ಕಡ್ಡಾಯವಾಗಿ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್ ಡಿಪಾರ್ಟ್‌ಮೆಂಟ್ (ಕೆ.ಜಿ.ಐ.ಡಿ) ವಿಮೆ ಹೊಂದಿರುತ್ತವೆ. ಈ ವಿಮೆಯನ್ನು ಕಾಲಕಾಲಕ್ಕೆ ನವೀಕರಣವಾಗುತ್ತದೆ. ವಿಮೆ ನವೀಕರಣಗೊಳ್ಳದ ಯಾವುದೇ ಇಲಾಖಾ ವಾಹನಗಳನ್ನು ಕರ್ತವ್ಯಕ್ಕೆ ಬಳಸಿಕೊಳ್ಳಲಾಗುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಲಾಗಿದೆ. ಸೋಶಿಯಲ್ ಮೀಡಿಯಾಗಳಲ್ಲಿ ತೋರಿಸಲಾಗಿರುವ ಹೆದ್ದಾರಿ ಗಸ್ತು ವಾಹನದ ವಿಮಾ ಅವಧಿ 2025ರ ಅಕ್ಟೋಬರ್ 13ರವರೆಗೆ ಮತ್ತು ವಾಹನದ ಮಾಲಿನ್ಯ ತಪಾಸಣಾ ಅವಧಿಯು 2025ರ ಜನವರಿ 8ರವರೆಗೆ ಚಾಲ್ತಿಯಲ್ಲಿ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ, ವಿಡಿಯೋ ಮಾಡಿ ವೈರಲ್ ಮಾಡಿರುವ ವ್ಯಕ್ತಿಯ ಬೈಕ್‌ ವಾಯುಮಾಲಿನ್ಯ ತಪಾಸಣಾ ಪತ್ರ ತೋರ್ಪಡಿಸದೇ ಇರುವುದರಿಂದ ಆತನ ಮೇಲೆ ರೂ. 500 ದಂಡ ವಿಧಿಸಲಾಗಿದೆ.

    Post Views: 309

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.