ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದೀಗ ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ, ಒಂದು ಸ್ಥಾನದಿಂದ 9 ಸ್ಥಾನ ಗೆಲ್ಲುವ ಮೂಲಕ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಅಲ್ಲದೆ, 2019ಕ್ಕಿಂತ ಈ ಬಾರಿ ಶೇ.14ರಷ್ಟು ಮತ ಗಳಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದೀಗ ಗ್ಯಾರಂಟಿ ಯೋಜನೆಗಳಿಗೆ ಜನ ಮನ್ನಣೆ ದೊರಕಿಲ್ಲ ಅನ್ನೋ ಕಾರಣಕ್ಕೆ ಕಾಂಗ್ರೆಸ್‌ನ ಕೆಲ ನಾಯಕರು ಅನೌಪಚಾರಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗ್ಯಾರಂಟಿ ಯಯೋಜನೆಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಗ್ಯಾರಂಟಿ ಯೋಜನೆ ಬಗ್ಗೆ ಪುನರ್ ಪರಿಶೀಲನೆ ನಡೆಯಬೇಕು ಎಂಬ ಅಭಿಪ್ರಾಯವನ್ನು ಬಹುತೇಕ ಶಾಸಕರು ಹೊಂದಿದ್ದಾರೆ ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಇದಕ್ಕೆ ಒಪ್ಪದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲಾಗದು ಎಂದು ಈ ನಾಯಕರಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ.
ರಾಜ್ಯದ ಎಲ್ಲ ಆರ್ಥಿಕ ಸಂಪನ್ಮಲಗಳನ್ನು ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೆ ವ್ಯಯಿಸುತ್ತಿದೆ. ಇಷ್ಟಾಗಿಯೂ ಚುನಾವಣೆಯಲ್ಲಿ ನಿರೀಕ್ಷಿತ ಸಾಧನೆ ಆಗಿಲ್ಲ. ಇದರರ್ಥ, ಸ್ಕೀಂಗಳು ಜನರ ಮನಸ್ಸು ಗೆದ್ದಿಲ್ಲ. ಗ್ಯಾರಂಟಿಗಾಗಿ ಅಭಿವೃದ್ಧಿ ಹತೋಟಿಯಲ್ಲಿಡಲಾಗಿದೆ, ಶಾಸಕರ ಅನುದಾನಕ್ಕೆ ಕತ್ತರಿ ಹಾಕಲಾಗಿದೆ. ಹೀಗಾಗಿ ರಾಜ್ಯದಲ್ಲಿ ಜಾರಿ ಮಾಡಲಾಗಿರುವ ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಯನ್ನು ನಡೆಸಬೇಕು ಅನ್ನೋದು ಬಹುತೇಹ ಶಾಸಕರ ವಾದವಾಗಿದೆ.
ಚುನಾವಣಾ ಫಲಿತಾಂಶದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, , ರಾಜ್ಯದಲ್ಲಿ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬಂದಿಲ್ಲ. 20 ಸ್ಥಾನಗಳವರೆಗೆ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ನಿರೀಕ್ಷೆ ಹೊಂದಿದ್ದೆವು. ಆದರೆ, 9 ಸ್ಥಾನಗಳಲ್ಲಿ ಗೆಲುವು ಸಾಧಿಸಲಷ್ಟೇ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಒಟ್ಟಾರೆಯಾಗಿ ಶಾಸಕರು ಗ್ಯಾರಂಟಿ ಯೋಜನೆಗಳ ಕುರಿತಂತೆ ಚರ್ಚಿಸಿದಾಗ ಅದನ್ನ ನಿಲ್ಲುಸುವುದಿಲ್ಲ ಎಂದು ಸಿಎಂ ಪ್ರತಿಕ್ರಯಿಸಿದ್ದಾರೆ ಎನ್ನಲಾಗಿದೆ.