ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜಾಮೀನು ಮಂಜೂರಾಗಿದೆ.
2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು.
ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದ್ದು ಇದರ ವಿಚಾರಣೆ ಈಗ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಕರಣದ ವಿಚಾರಣೆಗೆ ಕಳೆದ ವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿದನ್ನು ಸ್ಮರಿಸಬಹುದಾಗಿದೆ.