ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಬಜಪೆ ಗ್ರಾಮದ ಶಾಂತಿಗುಡ್ಡೆ ಚೆಕ್ ಪೋಸ್ಟ್ ಬಳಿ ಬಜಪೆ ಕಡೆಯಿಂದ ಇಬ್ಬರು ವ್ಯಕ್ತಿಗಳು ದನಗಳನ್ನು ಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಬಿಳಿ ಬಣ್ಣದ ಗೂಡ್ಸ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಬಜಪೆ ಪೊಲೀಸರು ಬೆನ್ನಟ್ಟಿ 7 ದನ, 2 ಕೋಣ, ಹಾಗೂ ಮಿನಿ ಗೂಡ್ಸ್ ವಾಹನವನ್ನು ಜೂ. 5ರಂದು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 8 ಲಕ್ಷ ರೂಪಾಯಿ. ದನ ಹಾಗೂ ಕೋಣಗಳನ್ನು ಎಲ್ಲಿಂದಲೋ ಕಳವು ಮಾಡಿ, ಅವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಮಿನಿ ಗೂಡ್ಸ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಜಪೆ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.