Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಖಾಸಗಿ ಬ್ಯಾಂಕ್ ಮ್ಯಾನೇಜರ್ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಖಾಸಗಿ ಬ್ಯಾಂಕ್ ಮ್ಯಾನೇಜರ್ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು

    June 11, 2024
    Share

    ಮಂಗಳೂರು: ಖಾಸಗಿ ಬ್ಯಾಂಕ್‌ವೊಂದರ ಮ್ಯಾನೇಜರ್ ಇನ್ನೊಬ್ಬನ ಜೊತೆ ಸೇರಿಕೊಂಡು ವ್ಯವಹಾರದಲ್ಲಿ 65 ಲಕ್ಷ ರೂ. ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿ ಕುಕ್ಕಾಡಿ ಕಾಂಪ್ಲೆಕ್ಸ್‌ ನಲ್ಲಿ ಮಳಿಗೆ ಹೊಂದಿರುವ ಶರೀಫ್ ಮತ್ತು ಸುರತ್ಕಲ್ ಖಾಸಗಿ ಬ್ಯಾಂಕ್ ಶಾಖೆಯ ಮ್ಯಾನೇಜರ್ ರಾಘವೇಂದ್ರ ಶೇಟ್ ಪ್ರಕರಣದ ಆರೋಪಿಗಳು. ತಾನು ತನ್ನ ಪತ್ನಿಯ ಜೊತೆ ಸೇರಿ ಸುರತ್ಕಲ್ ಖಾಸಗಿ ಬ್ಯಾಂಕ್ ಶಾಖೆಯಲ್ಲಿ ಖಾತೆ ತೆರೆದಿದ್ದೆ. ಅದೇ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿದ್ದ ತನ್ನ ಪರಿಚಿತ ರಾಘವೇಂದ್ರ ಶೇಟ್ ಕುಕ್ಕಾಡಿಯ ಕಾಂಪ್ಲೆಕ್ಸ್‌ವೊಂದರ ಮಾಲಕ ಶರೀಫ್‌ನ ಪರಿಚಯ ಮಾಡಿಕೊಟ್ಟಿದ್ದರು. ಹಾಗೇ ಬ್ಯಾಂಕ್‌ನಲ್ಲಿ ಠೇವಣಿ ಇಡುವ ಬದಲು ಶರೀಫ್ ಜತೆ ಕೋಕ್ ಸರಬರಾಜು ವ್ಯವಹಾರದಲ್ಲಿ ಪಾಲುದಾರನಾಗಲು ಸೂಚಿಸಿದ್ದರು. ಅದರಂತೆ ತಾನು ಇನ್ನೊಂದು ಬ್ಯಾಂಕ್ ಖಾತೆಯಿಂದ 2022ರ ಜೂ.6ರಂದು 50 ಲಕ್ಷ ರೂ. ಗಳನ್ನು ಶರೀಫ್ ಖಾತೆಗೆ ವರ್ಗಾಯಿಸಿದ್ದೆ. ಹಣದ ಭದ್ರತೆಗಾಗಿ ಅಬ್ದುಲ್ ಬಶೀರ್ ಎಂಬಾತನ ಹೆಸರಿನಲ್ಲಿರುವ ಸ್ಥಿರಾಸ್ತಿಯನ್ನು ಸಾಲ ವ್ಯವಹಾರಕ್ಕಾಗಿ ಕರಾರು ಮಾಡಿಸಲಾಗಿತ್ತು. ಬಳಿಕ ಅ.17ರಂದು 15 ಲಕ್ಷ ರೂ. ಗಳನ್ನು ಮತ್ತೆ ಶರೀಫ್ ಖಾತೆಗೆ ವರ್ಗಾವಣೆ ಮಾಡಿದ್ದೆ. ಅದಕ್ಕೂ ಚೆಕ್ ಲೀಫ್ ಪಡೆಯಲಾಗಿದೆ. ಇದಾದ ಬಳಿಕ ಕರಾರಿನಂತೆ ಶರೀಫ್ ಹಣ ಹಿಂತಿರುಗಿಸಲು ವಿಫಲನಾಗಿದ್ದರಿಂದ ಆತ ಈ ಹಿಂದೆ ನೀಡಿದ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕಿಗೆ ಹಾಕಿದಾಗ ಚೆಕ್ ಬೌನ್ಸ್ ಆಗಿರುತ್ತದೆ. ಹಣದ ಹೂಡಿಕೆ ವಿಚಾರದಲ್ಲಿ ಶರೀಫ್ 2ನೇ ಆರೋಪಿ ರಾಘವೇಂದ್ರನಿಗೆ ಕಮಿಷನ್ ಹಣ ಕೊಟ್ಟಿರುವುದಾಗಿ ತಿಳಿಸಿದ್ದಾನೆ. 2ನೇ ಆರೋಪಿ ರಾಘವೇಂದ್ರ ಶೇಟ್‌ನ ದುಷ್ಟೇರಣೆಯಂತೆ 1ನೇ ಆರೋಪಿ ಶರೀಫ್‌ನ ವ್ಯವಹಾರಕ್ಕೆ ಹಣ ತೊಡಗಿಸಿ ಬಳಿಕ ವಾಪಸ್ ನೀಡದೆ ವಂಚಿಸಿರುವುದಾಗಿ ಸೆನ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಪ್ರದೀಪ್ ಕುಮಾರ್ ಎಲ್. ದೂರಿನಲ್ಲಿ ತಿಳಿಸಿದ್ದಾರೆ.

    Post Views: 286

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.