Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ವ್ಯವಹಾರದಲ್ಲಿ 12.70 ಲಕ್ಷ ರೂ.ವಂಚನೆ ಆರೋಪ.. ದೂರು
    ಇತ್ತೀಚಿನ ಸುದ್ದಿ

    ಮಂಗಳೂರು : ವ್ಯವಹಾರದಲ್ಲಿ 12.70 ಲಕ್ಷ ರೂ.ವಂಚನೆ ಆರೋಪ.. ದೂರು

    June 13, 2024
    Share

    ಮಂಗಳೂರು : ಹಾರ್ಡ್‌ವೇರ್ ಅಂಗಡಿಯಿಂದ ವಸ್ತುಗಳನ್ನು ಪಡೆದು ಹಣ ಪಾವತಿಸದೆ 12.70 ಲಕ್ಷ ರೂ. ವಂಚಿಸಿರುವುದಾಗಿ ಆರೋಪಿಸಿ ಎರಡು ಅಂಗಡಿಗಳ ಮಾಲಕರ ವಿರುದ್ದ ಪೊಲೀಸರಿಗೆ ದೂರು ನೀಡಿರುವ ಘಟನೆ ವರದಿಯಾಗಿದೆ. ಪ್ರಕರಣದಲ್ಲಿ ನಗರದ ಅಝೀಝುದ್ದೀನ್ ರಸ್ತೆಯಲ್ಲಿರುವ ಬಾಲಾಜಿ ಹಾರ್ಡ್‌ವೇರ್‌ನ ಮಾಲಕ ವಿಕ್ರಮ್ ಪಿ. ಮಾಲಿ ಎಂಬವರು, ವಿಠಲ್ ಕುಲಾಲ್ ಕೊಣಾಜೆ ಮತ್ತು ವಿನುತಾ ಬಿ. ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ವಿಠಲ್ ಕುಲಾಲ್ ಕೊಣಾಜೆ ಮನಿಸ್ಕ್ ಎಂಟರ್ ಪ್ರೈಸಸ್ ಹಾಗೂ ವಿನುತಾ ಬಿ.ವಿ.ಕೆ. ಸೋಫಾ ಮೇಕರ್ಸ್ ನ ಮಾಲಕರಾಗಿದ್ದು, ಕಳೆದ ಸುಮಾರು ವರ್ಷಗಳಿಂದ ವಿಕ್ರಮ್ ಪಿ ಮಾಲಿ ಅವರ ಗ್ರಾಹಕರಾಗಿದ್ದಾರೆ. ಇವರು ಸಾಲದ ರೂಪದಲ್ಲಿ ವಸ್ತುಗಳನ್ನು ಖರೀದಿಸುತ್ತಿದ್ದು, ನಂತರ ಚೆಕ್ ಮುಖಾಂತರ ಹಣ ಪಾವತಿಸುತ್ತಿದ್ದರು. ವಿಕ್ರಮ್ ಅವರು ಆರೋಪಿತರ ಮನಿಸ್ಕ್ ಎಂಟರ್ಪ್ರೈಸಸ್ 2019ರಿಂದ 31-03-2023 ರವರೆಗೆ 40,93,570.43 ರೂ ಹಾಗೂ ಬಿ.ವಿ.ಕೆ. ಸೋಫಾ ಮೇಕರ್ಸ್ ಗೆ 16-04-2018 ರಿಂದ 19-03-2023 ರ ವರೆಗೆ 3,98,058 ರೂ. ಗಳ ವಸ್ತುಗಳನ್ನು ಮಾರಾಟ ಮಾಡಿದ್ದರು. ಈ ವ್ಯವಹಾರದಲ್ಲಿ ದೂರುದಾರರಿಗೆ ಮನಿಸ್ಕ್ ಎಂಟರ್ ಪ್ರೈಸಸ್ ನಿಂದ 12,28, 032ರೂ ಹಾಗೂ42,877 ರೂ. ಬರಲು ಬಾಕಿ ಇದ್ದು, ವಿಕ್ರಮ್ ಈ ಬಗ್ಗೆ ಹಲವು ಬಾರಿ ಆರೋಪಿಗಳಲ್ಲಿ ಕೇಳಲು ಹೋದಾಗ ಅವರ ಕೊಡುವುದಾಗಿ ನಂಬಿಸಿದ್ದರು ಎನ್ನಲಾಗಿದೆ. ಆರೋಪಿಗಳು ಒಟ್ಟು 12,70,000 ರೂ. ಹಣವನ್ನು ವಾಪಸ್ ನೀಡದೆ ನಂಬಿಕೆ ದ್ರೋಹ ಮಾಡಿ ಮೋಸ ಮಾಡಿರುವುದಾಗಿ ವಿಕ್ರಮ್ ಪಿ. ಮಾಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    Post Views: 237

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.