ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ
ಆಲ್ಟೊ ಮತ್ತು ಬೋಲೆರೋ ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಲ್ಟೊ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಯಲಾಗಿದೆ.
ಮೃತರನ್ನು ಸೋಮವಾರಪೇಟೆ ಮೂಲದ ಲೋಕೇಶ್, ರವೀಂದ್ರ ಎಂದು ತಿಳಿದು ಬಂದಿದೆ.
ಈ ಘಟನೆಯಲ್ಲಿ ಬೋಲೆರೋ ವಾಹನದಲ್ಲಿದ್ದವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಎನ್ನಲಾಗಿದೆ.
ಮಂಗಳೂರಿನಿಂದ ಮಡಿಕೇರಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.