Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೆರ್ನೆ: ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು – ಎಸ್ಎಸ್ಎಲ್‌ಸಿ ವಿದ್ಯಾರ್ಥಿಯ ಬಂಧನ!
    ಇತ್ತೀಚಿನ ಸುದ್ದಿ

    ಪೆರ್ನೆ: ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು – ಎಸ್ಎಸ್ಎಲ್‌ಸಿ ವಿದ್ಯಾರ್ಥಿಯ ಬಂಧನ!

    June 19, 2024
    Share

    ಉಪ್ಪಿನಂಗಡಿ : ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇದೀಗ ಮೃತ ಮಹಿಳೆಯ ಸಂಬಂಧಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಹೇಮಾವತಿ ಅವರ ಮನೆಗೆ ಬಂದಿದ್ದ ಅವರ ಸಹೋದರಿಯ ಪುತ್ರ, ಎಸ್ಎಸ್ಎಲ್‌ಸಿ ವಿದ್ಯಾರ್ಥಿ ರವಿವಾರ ರಾತ್ರಿ ತಂಗಿದ್ದ. ತಡರಾತ್ರಿ ವೇಳೆ ಈ ಅಪ್ರಾಪ್ತ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹಸುಖ ಬಯಸಿದ್ದಾನೆ. ಇದಕ್ಕೆ ಹೇಮಾವತಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಆರೋಪಿ ಬಾಲಕ ಅವರ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಹೇಮಾವತಿಯವರ ಪತಿ ವಿಠಲ ಪೈ ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. “ನನ್ನ ಪತ್ನಿ ಹೇಮಾವತಿ ಆಕೆಯ ತವರು ಮನೆಯಲ್ಲಿ ವಾಸ್ತವ್ಯವಿದ್ದಾಳೆ. ಆಕೆ ಮಲಗಿದಲ್ಲಿಯೇ ಮೃತಪಟ್ಟಿದ್ದಾಳೆ ಎಂದು ತನಗೆ ಮಾಹಿತಿ ಬಂದಿತ್ತು. ಆದರೆ ಪತ್ನಿಯ ಮೃತ ದೇಹದಲ್ಲಿ ಗಾಯದ ಗುರುತು ಬಗ್ಗೆ ಸಂಶಯ ಬಂದಿರುತ್ತದೆ. ಜೂನ್ 16ರಂದು ರಾತ್ರಿ ಪತ್ನಿಯ ಸಹೋದರಿಯ ಪುತ್ರ ಪತ್ನಿಯ ಮನೆಗೆ ಬಂದಿದ್ದಾನೆ‌. ರಾತ್ರಿ ಪತ್ನಿಯ ತಾಯಿ, ಪತ್ನಿಯ ಸಹೋದರಿಯ ಪುತ್ರ ಮತ್ತು ಪತ್ನಿ ಊಟ ಮಾಡಿ ಮಲಗಿದ್ದಾರೆ. ಆ ಬಳಿಕ ರಾತ್ರಿಯಿಂದ ಜೂನ್ 17ರ ಬೆಳಗ್ಗಿನ ಜಾವದ ಮಧ್ಯದ ಅವಧಿಯಲ್ಲಿ ಪತ್ನಿಯ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆಗೈದಿರುವ ಅನುಮಾನ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದರು. ಮೃತ ಹೇಮಾವತಿಯವರ ಪತಿ ವಿಠಲ ಪೈ ಅವರ ದೂರಿನನ್ವಯ ಆರೋಪಿ ಬಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಆತ ತಾನೇ ಕೊಲೆ ಮಾಡಿರುವುದು ಒಪ್ಪಿಕೊಂಡಿದ್ದಾನೆ. ಹೀಗಾಗಿ ಅಪ್ರಾಪ್ತ ಬಾಲಕನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕರಣದ ತನಿಖಾಧಿಕಾರಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟ‌ರ್ ರವಿ ಬಿ.ಎಸ್. ತಿಳಿಸಿದ್ದಾರೆ.

    Post Views: 236

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.