Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ತ್ವರಿತಗೊಳಿಸಿ : ಸಂಸದ ಕ್ಯಾ.ಬ್ರಿಜೇಶ್ ಚೌಟ
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ತ್ವರಿತಗೊಳಿಸಿ : ಸಂಸದ ಕ್ಯಾ.ಬ್ರಿಜೇಶ್ ಚೌಟ

    June 20, 2024
    Share

    ಮಂಗಳೂರು: ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ಸ್ಥಾಪಿಸಲು ಉದೇಶಿಸಿರುವ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸುವಂತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು ಸೂಚಿಸಿದ್ದಾರೆ.ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಸರಕಾರದ ಯೋಜನೆಗಳ ಅನುಷ್ಠಾನದ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 104 ಎಕರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಕಾಮಗಾರಿಯನ್ನು ಸಣ್ಣಪುಟ್ಟ ಸಮಸ್ಯೆಗಳಿಗಾಗಿ ಇಡೀ ಯೋಜನೆಯನ್ನು ಸ್ಥಗಿತಗೊಳಿಸಿರುವುದು ಸರಿಯಲ್ಲ. ಹಲವು ವರ್ಷಗಳ ಹಿಂದೆ ಕೇಂದ್ರ ರಾಸಾಯನಿಕ ಸಚಿವರಾಗಿದ್ದ ಅನಂತಕುಮಾರ್ ಅವರು ಜಿಲ್ಲೆಗೆ ಪ್ಲಾಸ್ಟಿಕ್ ಪಾರ್ಕ್ ಮಂಜೂರುಗೊಳಿಸಿದ್ದರು. ಪ್ರಸ್ತುತ 32 ಕೋಟಿ ರೂ. ಅನುದಾನ ಇದ್ದರೂ, ಕಾಮಗಾರಿ ಸ್ಥಗಿತಗೊಂಡಿರುವುದಕ್ಕೆ ಸಂಸದರು ಅತೃಪ್ತಿ ವ್ಯಕ್ತಪಡಿಸಿದರು.ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಯೋಜನೆಯಾಗಿದ್ದು, ನಿರ್ಮಾಣಗೊಂಡರೆ ಸಾವಿರಾರು ಮಂದಿಗೆ ಉದ್ಯೋಗ ದೊರಕಲಿದೆ. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ರಚಿಸಿ ಕಾಮಗಾರಿ ಮುಂದುವರಿಸುವಂತೆ ಸಂಸದರು ಸೂಚಿಸಿದರು.ಜಲಜೀವನ ಯೋಜನೆ: ಜಲಜೀವನ ಯೋಜನೆಯಡಿ ಮನೆ ಮನೆಗೆ ನೀರು ಸರಬರಾಜು ಮಾಡುವ ಯೋಜನೆಯ ಕಾಮಗಾರಿ ಪರಿಶೀಲಿಸಿದ ಅವರು, ಯೋಜನೆಯ ಅನುಷ್ಠಾನದಲ್ಲಿ ವಿಳಂಬ ಸಲ್ಲದು. ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಈ ಯೋಜನೆಯನ್ನು ಸಮರ್ಪಕವಾಗಿ, ಅನುಷ್ಠಾನಗೊಳಿಸಬೇಕು. ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಿ, ಪ್ರಚಾರ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳಿಸಿದರು.ಪ್ರಧಾನಮಂತ್ರಿ ಉದ್ಯೋಗ ಖಾತರಿ ಯೋಜನೆಯಲ್ಲಿ(ಪಿಎಂಇಜಿಪಿ) ಬ್ಯಾಂಕ್ ಸಾಲವನ್ನು ಅರ್ಹರಿಗೆ ಮಾತ್ರ ದೊರಕುವುದನ್ನು ಖಾತ್ರಿ ಪಡಿಸಬೇಕು. ಬೇರೆ ಯೋಜನೆಯ ಸಾಲವನ್ನು ಪಿಎಂಇಜಿಪಿ ಯೋಜನೆಯಡಿ ಮಂಜೂರು ಮಾಡುವುದನ್ನು ಒಪ್ಪಲಾಗದು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸಂಸದ ಬೃಜೇಶ್ ಚೌಟ ಅವರು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶಿಸಿದರು.ಎಲ್ಲ ಬ್ಯಾಂಕುಗಳು ತಮ್ಮ ಸಿ.ಎಸ್.ಆರ್. ಅನುದಾನವನ್ನು ಜಿಲ್ಲೆಗೆ ಸಮರ್ಪಕವಾಗಿ ಬಳಸಿ, ಸಾರ್ವಜನಿಕ ಉಪಯೋಗಿ ಕಾರ್ಯಗಳಿಗೆ ವೆಚ್ಚ ಮಾಡಬೇಕು. ಗ್ರಾಮೀಣ ಪ್ರದೇಶಗಳ ಬ್ಯಾಂಕ್ ಶಾಖೆಗಳಲ್ಲಿ ಕನ್ನಡ ಮಾತನಾಡಬಲ್ಲ ಅಧಿಕಾರಿ ಮತ್ತು ಸಿಬ್ಬಂಧಿಗಳನ್ನು ನೇಮಿಸಲು ಒತ್ತು ನೀಡಬೇಕು ಎಂದು ತಿಳಿಸಿದರು. 

    Post Views: 225

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.