Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಆರೋಗ್ಯ»ಟೀ ಮಾಡುವಾಗ ಅಪ್ಪಿತಪ್ಪಿ ಈ ತಪ್ಪನ್ನು ಮಾಡ್ಬೇಡಿ​. ಮಾಡಿದ್ರೆ ಆರೋಗ್ಯಕ್ಕೆ ತಂಬಾ ಡೇಂಜರ್​!
    ಆರೋಗ್ಯ

    ಟೀ ಮಾಡುವಾಗ ಅಪ್ಪಿತಪ್ಪಿ ಈ ತಪ್ಪನ್ನು ಮಾಡ್ಬೇಡಿ​. ಮಾಡಿದ್ರೆ ಆರೋಗ್ಯಕ್ಕೆ ತಂಬಾ ಡೇಂಜರ್​!

    June 24, 2024
    Share

    ಜಗತ್ತಿನ ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು ಕಪ್ ಕಾಫಿ-ಟೀ ಕುಡಿಯಲಿಲ್ಲ ಅಂದ್ರೆ ಆ ದಿನ ಏನೋ ಮಿಸ್​ ಮಾಡಿಕೊಂಡಂತೆ ಜನರು ಚಡಪಡಿಸುತ್ತಾರೆ. ಒಂದು ಹೊತ್ತು ಊಟ ಬೇಕಾದರೂ ಬಿಡುತ್ತೇನೆ ಆದರೆ, ಟೀ-ಕಾಫಿ ಬಿಡುವುದಿಲ್ಲ ಎಂದು ಹೇಳುವ ಜನರು ಕೂಡ ನಮ್ಮ ನಡುವೆ ಇದ್ದಾರೆ.

    ದಿನಕ್ಕೊಂದು ಟೀ ಕುಡಿಯದಿದ್ದರೂ ಸುಸ್ತು, ಚಡಪಡಿಕೆ ಹಾಗೂ ತಲೆ ನೋವು ಅನುಭವಿಸುವವರೂ ಇದ್ದಾರೆ. ಅಷ್ಟೊಂದು ಜನಪ್ರಿಯವಾಗಿದೆ ಈ ಪಾನೀಯ.

    ಅವರವರ ರುಚಿ ಮತ್ತು ಆರೋಗ್ಯಕ್ಕೆ ತಕ್ಕಂತೆ ಗ್ರೀನ್ ಟೀ, ಬ್ಲಾಕ್ ಟೀ, ಲೆಮನ್ ಟೀ, ಹಾಲಿನ ಟೀ ಕುಡಿಯುತ್ತಾರೆ. ಹೆಚ್ಚಿನವರು ಹಾಲಿನ ಚಹಾವನ್ನು ಇಷ್ಟಪಡುತ್ತಾರೆ. ಹಾಲಿಗೆ ಹೆಚ್ಚು ಚಹಾ ಎಲೆಗಳನ್ನು ಸೇರಿಸಿ ಮತ್ತು ದೀರ್ಘಕಾಲದವರೆಗೆ ಕುದಿಸಿ ತಯಾರಿಸಿದ ಚಹಾವನ್ನು ಇಷ್ಟಪಡುವ ಇದ್ದಾರೆ. ಆದಾಗ್ಯೂ, ದೀರ್ಘಕಾಲದವರೆಗೆ ಚಹಾವನ್ನು ಕುದಿಸುವುದು ಅನೇಕ ಹಾನಿಕಾರಕ ಸಂಯುಕ್ತಗಳನ್ನು ಉಂಟುಮಾಡುತ್ತದೆ. ಅತಿಯಾಗಿ ಕುದಿಸಿದ ಚಹಾವು ಸ್ಲೋ ಪಾಯಿಸನ್​ ಆಗಿ ಪರಿವರ್ತನೆಯಾಗಬಹುದು ಎಂದು ಪೌಷ್ಟಿಕತಜ್ಞರು ಎಚ್ಚರಿಸಿದ್ದಾರೆ.

    ಚಹಾವನ್ನು ಎಷ್ಟು ಹೊತ್ತು ಕುದಿಸಬೇಕು?
    ಚಹಾವನ್ನು ಟೇಸ್ಟ್​ ಮತ್ತು ಆರೋಗ್ಯಕರವಾಗಿಸಲು ಕೇವಲ 4 ರಿಂದ 5 ನಿಮಿಷಗಳ ಕಾಲ ಕುದಿಸಬೇಕು. ಅದಕ್ಕಿಂತ ಹೆಚ್ಚು ಕುದಿಸಿದರೆ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.

    ದೀರ್ಘಕಾಲ ಕುದಿಸುವಿಕೆಯ ಪರಿಣಾಮಗಳೇನು?
    * ಹಾಲಿನ ಚಹಾವನ್ನು ದೀರ್ಘಕಾಲದವರೆಗೆ ಕುದಿಸುವುದರಿಂದ ಅದರಲ್ಲಿರುವ ಟ್ಯಾನಿನ್‌ಗಳ ಪ್ರಮಾಣವನ್ನು ಹೆಚ್ಚಾಗುತ್ತದೆ. ಇದು ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಅಡ್ಡಿಪಡಿಸುತ್ತದೆ. ಅಲ್ಲದೆ, ಹೆಚ್ಚಿನ ಟ್ಯಾನಿನ್ ಅಂಶವು ದೇಹದಲ್ಲಿ ಕಬ್ಬಿಣದ ಕೊರತೆಯನ್ನು ಉಂಟುಮಾಡುತ್ತದೆ. ಇದರಿಂದ ರಕ್ತಹೀನತೆ ಬರುವ ಸಾಧ್ಯತೆ ಇದೆ.
    * ಅತಿಯಾಗಿ ಕುದಿಸುವ ಹಾಲಿನ ಚಹಾವು ಅದರ pH ಅನ್ನು ಬದಲಾಯಿಸುತ್ತದೆ. ಚಹಾವು ಹೆಚ್ಚು ಆಮ್ಲೀಯವಾಗುತ್ತದೆ.
    * ಅತಿಯಾಗಿ ಕುದಿಸುವ ಹಾಲಿನ ಚಹಾವು ಅಕ್ರಿಲಾಮೈಡ್ ಅನ್ನು ಉತ್ಪಾದಿಸುತ್ತದೆ. ಇದು ಕ್ಯಾನ್ಸರ್ ಉಂಟುಮಾಡುವ ವಸ್ತುವಾಗಿದ್ದು, ಆರೋಗ್ಯಕ್ಕೆ ಹಾನಿಕಾರಕವಾಗಿದೆ.
    * ತುಂಬಾ ಹೊತ್ತು ಹಾಲಿನೊಂದಿಗೆ ಕುದಿಸಿದ ಚಹಾ ಕುಡಿಯುವುದರಿಂದ ಅಸಿಡಿಟಿ, ಹೊಟ್ಟೆನೋವು ಮತ್ತು ಮಲಬದ್ಧತೆಯಂತಹ ಸಮಸ್ಯೆಗಳು ಉಂಟಾಗಬಹುದು.
    * ಕುದಿಸಿದ ಚಹಾವನ್ನು ಮತ್ತಷ್ಟು ಕುದಿಸುವುದರಿಂದ ಅದರಲ್ಲಿ ಟ್ಯಾನಿನ್ ಪ್ರಮಾಣ ಹೆಚ್ಚಾಗಿ, ರಕ್ತದೊತ್ತಡವನ್ನು ಹೆಚ್ಚಿಸುತ್ತದೆ.
    * ಅತಿಯಾಗಿ ಕುದಿಸುವುದುರಿಂದ ಟೀ ತನ್ನ ರುಚಿಯನ್ನು ಕಳೆದುಕೊಳ್ಳುತ್ತದೆ.
    * ಹೆಚ್ಚು ಸಮಯ ಕುದಿಸಿದ ಹಾಲಿನ ಚಹಾವು ಹಾಲಿನಲ್ಲಿರುವ ಅನೇಕ ಪೋಷಕಾಂಶಗಳಾದ ಪ್ರೋಟೀನ್, ವಿಟಮಿನ್ ಡಿ ಮತ್ತು ಕ್ಯಾಲ್ಸಿಯಂ ಅನ್ನು ನಾಶಪಡಿಸುತ್ತದೆ.

    Post Views: 469

    Related Posts

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ ; ಪುತ್ತೂರು ಸೆಶನ್ಸ್ ಕೋರ್ಟಿನಿಂದ ಮಧ್ಯಂತರ ರಿಲೀಫ್

    October 28, 2025

    ಇನ್ಮುಂದೆ ಯಾರೂ ‘ಹಿಮಾಲಯನ್ ಉಪ್ಪು’ ಬಳಸಬೇಡಿ.! ಆರೋಗ್ಯ ಇಲಾಖೆ ಎಚ್ಚರಿಕೆ

    February 9, 2025

    ‘ಧೂಮಪಾನಿ’ಗಳೇ ಎಚ್ಚರ ; ನೀವು ದಿನಕ್ಕೊಂದು ‘ಸಿಗರೇಟ್’ ಸೇದಿದ್ರೂ ’40 ವರ್ಷ’ ದಾಟೋದೇ ಡೌಟು ; ಅಧ್ಯಯನ

    January 5, 2025
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.