Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಒಂದೇ ಮಳೆಗೆ ಕುಸಿದ ಬೆಂಗಳೂರು-ಮಂಗಳೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ‌
    ಇತ್ತೀಚಿನ ಸುದ್ದಿ

    ಒಂದೇ ಮಳೆಗೆ ಕುಸಿದ ಬೆಂಗಳೂರು-ಮಂಗಳೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ‌

    June 28, 2024
    Share

    ಸಕಲೇಶಪುರ : ಹಾಸನ-ಬಂಟ್ವಾಳ ನಡುವೆ ನಡೆಯುತ್ತಿರುವ ಬೆಂಗಳೂರು-ಮಂಗಳೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ತಾಲ್ಲೂಕಿನ ಆನೆಮಹಲ್ ಗ್ರಾಮದಲ್ಲಿ ಗುರುವಾರ ಸುರಿದ ಒಂದೇ ಮಳೆಗೆ ಕುಸಿದಿದೆ.

    ಸಕಲೇಶಪುರ ಬೈಪಾಸ್‌ ಟೋಲ್‌ಗೇಟ್‌ನಿಂದ ಮಾರನಹಳ್ಳಿವರೆಗೆ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಗ್ರಾಮದಲ್ಲಿ ಕಾಂಕ್ರಿಟ್‌ ರಸ್ತೆಯ ಕೆಳಗೆ ಅಳವಡಿಸಿರುವ ಮೋರಿಯ ಪೈಪ್‌ ತುಂಡಾಗಿ ರಸ್ತೆಯ ಒಂದು ಬದಿ ಕುಸಿದಿದೆ.

    ‘ರಸ್ತೆಯ ಕೆಳಭಾಗದಲ್ಲಿ ಅಳವಡಿಸಿರುವ ಚರಂಡಿಯ ಪೈಪುಗಳು ಉತ್ತಮ ಗುಣಮಟ್ಟದಿಂದ ಕೂಡಿಲ್ಲ’ ಎಂದು ಗ್ರಾಮದ ಭಾಸ್ಕರ್, ಹಸೈನಾರ್ ಅವರು ಕಾಮಗಾರಿ ಸಂದರ್ಭದಲ್ಲೇ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಗುತ್ತಿಗೆದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಂಜಿನಿಯರ್‌ಗಳು ಅದನ್ನುಗಂಭೀರವಾಗಿ ಪರಿಗಣಿಸದೆ ಕಳಪೆ ಕಾಮಗಾರಿ ಮಾಡಿದ್ದೇ ಕುಸಿಯಲು ಕಾರಣ’ ಎಂದು ಗ್ರಾಮಸ್ಥರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

    ಶಾಸಕ ಭೇಟಿ: ಸ್ಥಳಕ್ಕೆ ಗುರುವಾರ ಸಂಜೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲಿಸಿದರು.

    ‘ಹಾಸನದಿಂದ ಮಾರನಹಳ್ಳಿವರೆಗೆ ಹೆದ್ದಾರಿ ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿಲ್ಲ ಎಂದು ಗುತ್ತಿಗೆದಾರರಿಗೆ ಹಾಗೂ ಎಂಜಿನಿಯರ್‌ಗಳಿಗೆ ಹಲವು ಬಾರಿ ಹೇಳಿದ್ದೆ. ನಿತ್ಯ 30 ಸಾವಿರಕ್ಕೂ ಹೆಚ್ಚು ವಾಹನಗಳು ಸಂಚರಿಸುವ ಹೆದ್ದಾರಿಯು ಕುಸಿದರೆ ಆಗುವ ಅನಾಹುತವನ್ನು ಊಹಿಸಲೂ ಸಾಧ್ಯವಿಲ್ಲ’ ಎಂದರು.

    ‘ಎಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರು ಇಂತಹ ಸಮಸ್ಯೆಗಳಾಗದಂತೆ ಗಂಭೀರವಾಗಿ ಪರಿಗಣಿಸಿ, ತ್ವರಿತವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.

    Post Views: 187

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.