Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ನಡುವೆ ಮರಾಮಾರಿ : ಇಬ್ಬರು ಕೈದಿಗಳಿಗೆ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ನಡುವೆ ಮರಾಮಾರಿ : ಇಬ್ಬರು ಕೈದಿಗಳಿಗೆ ಗಂಭೀರ ಗಾಯ

    July 2, 2024
    Share

     ಮಂಗಳೂರು ನಗರದ ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಅದರಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿಯಲಾಗಿದೆ.

    ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30)ಗೆ ಗಾಯಗೊಂಡವರು. ಇವರಿಬ್ಬರು ಉಳ್ಳಾಲ ಠಾಣಾ ವ್ಯಾಪ್ತಿಯ ಕೇಸ್ ನಲ್ಲಿ ವಿಚಾರಣಾಧೀನ ಖೈದಿಗಳಾಗಿದ್ದಾರೆ.

    ರೌಡಿ ಶೀಟರ್‌ಗಳಾಗಿರೋ ಟೋಪಿ ನೌಫಲ್ ಮತ್ತು ಗ್ಯಾಂಗ್ ನಿಂದ ಇಬ್ಬರ ಮೇಲೆ ದಾಳಿ ನಡೆದಿದೆ. ಅಡುಗೆ ಮನೆಯಲ್ಲಿದ್ದ ಕೆಲವು ಹರಿತವಾದ ವಸ್ತುಗಳಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ತಲೆ, ಭುಜ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿರುವ ಮಾಹಿತಿ ಸಿಕ್ಕಿದೆ.

    ಸದ್ಯ ಇಬ್ಬರೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆರೋಪಿಗಳು ಮತ್ತು ಹಲ್ಲೆಗೊಳಗಾದ ಇಬ್ಬರೂ ಅನೇಕ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಅಲ್ಲದೇ ರೌಡಿ ಶೀಟರ್ ಗಳಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

    ಘಟನೆ ಜೈಲಿನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರಾಗೃಹದ ಅಧಿಕಾರಿಗಳ ದೂರಿನ ಮೇರೆಗೆ ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್ ಹಾಗೂ ಜೈನುದ್ದೀನ್ ಮೇಲೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 304

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.