ಅಪ್ರಾಪ್ತೆಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಶೌಚಾಲಯದಲ್ಲಿ ಗಂಡು ಮಗುವಿಗೆ ಅಪ್ರಾಪ್ತೆ ಜನ್ಮ ನೀಡಿದ್ದಾಳೆ. ಈ ಸಂಭಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಮಹಿಳಾ ಪೊಲೀಸರು ಬಾಲಕಿ ಸ್ಥಿತಿಗೆ ಕಾರಣನಾದ ಭೂಪನಿಗಾಗಿ ಹುಡುಕಾಟ ನಡೆಸಿದ್ದಾರೆ.
ಏನಿದು ಘಟನೆ?
ಪೊಲೀಸರಿಗೆ ಸಿಕ್ಕ ಪ್ರಾಥಮಿಕ ಮಾಹಿತಿ ಪ್ರಕಾರ, ಬಾಲಕಿಯು ಯುವಕನೊಂದಿಗೆ ಪ್ರೀತಿಯಲ್ಲಿದ್ದಳು. ಆದ್ರೆ ಆತ ಅದೇ ಕಾಲೇಜಿನ ಯುವಕನಾ ಅಥವಾ ಹೊರಗಿನವನಾ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಬಾಲಕಿ ಸ್ಥಿತಿ ಕಾರಣನಾದ ಯುವಕನಿಗಾಗಿ ಹುಟುಕಾಟ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಮಂಗಳವಾರ ಶೌಚಾಲಯಕ್ಕೆ ತೆರಳಿದಾಗ ಬಾಲಕಿ ಅಲ್ಲಿಯೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಬಾಲಕಿಯನ್ನ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಇಷ್ಟು ದಿನ ಯಾರಿಗೂ ಗೊತ್ತಿರಲಿಲ್ಲವೇ? ಅಥವಾ ಸ್ನೇಹಿತರಿಗೆ ಗೊತ್ತಿದ್ದೂ ವಿಚಾರ ಮುಚ್ಚಿಟ್ಟಿದ್ದರಾ? ಅನ್ನೋ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.