ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ ಅಂಚಿ ಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಜಾರಿಗೆ ಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ, ಪೌಜಿಯಾ, ಸೌದ ಮತ್ತು 6 ತಿಂಗಳ ಮಗು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಕಮರಿಗೆ ತಲೆಕೆಳಗಾಗಿ ಕಾರು ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ 6 ತಿಂಗಳ ಮಗು ಸಹಿತ ಐದು ಮಂದಿ ಪ್ರಯಾಣಿಕರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಸಣ್ಣಪುಟ್ಟ ಗಾಯಗೊಂಡ ಇವರು ಬಂಟ್ವಾಳ ಸರಕಾರಿ ಆಸ್ಪತ್ರೆಯ ಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ಸಂಬಂಧಿಕರೊರ್ವರು ಹುಷಾರಿಲ್ಲದ ಕಾರಣಕ್ಕಾಗಿ ದಾಖಲಾಗಿದ್ದು ಅವರ ಯೋಗ ಕ್ಷೇಮ ವಿಚಾರಿಸುವ ಸಲುವಾಗಿ ತೆರಳುವ ವೇಳೆ ಈ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಹಲವಾರು ತಿರುವುಗಳನ್ನು ಹೊಂದಿದ್ದು, ಕಳೆದ ಕೆಲ ದಿನಗಳಿಂದ ಸುರಿಯುವ ಮಳೆಗೆ ಹೆದ್ದಾರಿ ಪಕ್ಕದ ಗುಡ್ಡ ಜರಿದು , ರಸ್ತೆಗೆ ಮಣ್ಣು ಬಿದ್ದಿರುವ ಹಿನ್ನೆಲೆಯಲ್ಲಿ ರಸ್ತೆ ಜಾರುತ್ತಿದ್ದು ಅವಘಡ ಸಂಭವಿಸರಬೇಕು ಎನ್ನಲಾಗಿದೆ.
ಸ್ಥಳಕ್ಕೆ ತುರ್ತಾಗಿ ಎಮರ್ಜೆನ್ಸಿ 112 ಪೋಲೀಸ್ ವಾಹನ ತೆರಳಿದ್ದು ಅಲ್ಲಿನ ಗಾಯಗಳನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಎಸ್. ಐ.ಮೂರ್ತಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.