Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ಬಂಟ್ವಾಳದ ವ್ಯಕ್ತಿ ಬಲಿ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ಬಂಟ್ವಾಳದ ವ್ಯಕ್ತಿ ಬಲಿ..!

    July 14, 2024
    Share

    ಬಂಟ್ವಾಳ: ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ವ್ಯಕ್ತಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಘಟನೆ ದ.ಕ.ಜಿಲ್ಲೆಯಲ್ಲಿ ನಡೆದಿದೆ.

    ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ. ಇವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಈತ ಚಿಕಿತ್ಸೆಗೆ ಸ್ಪಂದಿಸದ  ಕಾರಣ ದೇರಳೆಕಟ್ಟೆ  ಖಾಸಗಿ ಆಸ್ಪತ್ರೆಗೆ ದಾಖಲಸಲಾಗಿತ್ತು. ಆದರೆ ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದೆ ಯತೀಶ್ ಕೊನೆಯುಸಿರೆಳೆದಿದ್ದಾನೆ ಎಂದು‌ ಮೂಲಗಳು ತಿಳಿಸಿವೆ.

    ಮೂಲತಃ ಶಂಭೂರು ಗರಡಿ ನಿವಾಸಿಯಾಗಿರುವ ಯತೀಶ್ ಅವರು ಇತ್ತೀಚಿಗೆ ಪತ್ನಿಯ ತವರೂರು ಪುತ್ತೂರಿನಲ್ಲಿ ಮನೆ ಮಾಡಿ ಅಲ್ಲಿ ವಾಸವಾಗಿದ್ದರು. ಭಾರತ್ ಬೀಡಿ ಕಂಪೆನಿಯ ಬಿಸಿರೋಡಿನ ಶಾಖೆಯಲ್ಲಿ ಸಿಬ್ಬಂದಿಯಾಗಿದ್ದ ಇವರು ಜ್ವರದ ಸಂಧರ್ಭದಲ್ಲಿ ಅಲ್ಲಿಯ ಜೊತೆಗಾರ ಸಿಬ್ಬಂದಿ ಜೊತೆ ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದರು.  ಯತೀಶ್ ಅವರು ಉತ್ತಮ ಗುಣನಡತೆಯಿಂದ ಶಂಭೂರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು. ಪತ್ನಿ ಹಾಗೂ ಎರಡು ಹೆಣ್ಮಕ್ಕಳು ಸಹಿತ ಅಪಾರ ಸ್ನೇಹಿತರನ್ನು ಅಗಲಿದ್ದಾರೆ.

    Post Views: 328

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.