Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಇನ್ನೂ ಮುಂದೆ ‘ಗಂಧದ ಮರ’ ಕಡಿದರೆ ಕನಿಷ್ಠ 50 ಸಾವಿರ ದಂಡ, 5 ವರ್ಷ ಶಿಕ್ಷೆ : ಹೈಕೋರ್ಟ್ ಮಹತ್ವದ ಆದೇಶ
    Uncategorized

    ಇನ್ನೂ ಮುಂದೆ ‘ಗಂಧದ ಮರ’ ಕಡಿದರೆ ಕನಿಷ್ಠ 50 ಸಾವಿರ ದಂಡ, 5 ವರ್ಷ ಶಿಕ್ಷೆ : ಹೈಕೋರ್ಟ್ ಮಹತ್ವದ ಆದೇಶ

    July 18, 2024
    Share

    ಬೆಂಗಳೂರು : ಬಡವ ಮತ್ತು ಬಡಗಿ ಎಂಬ ಕಾರಣ ಪರಿಗಣಿಸಿ ಗಂಧದ ಮರ ಕಡಿದು ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ಸಾವಿರ ರು. ದಂಡ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಒಪ್ಪದ ಹೈಕೋರ್ಟ್, ದಂಡದ ಮೊತ್ತವನ್ನು ಒಂದು ಲಕ್ಷಕ್ಕೆ ಹೆಚ್ಚಿಸಿರುವ ಜೊತೆಗೆ 5 ವರ್ಷ ಜೈಲು ಶಿಕ್ಷೆಯನ್ನು ಕಾಯಂಗೊಳಿಸಿದೆ.

    ಹೌದು ಪ್ರಕರಣದ ಆರೋಪಿ ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ನಿವಾಸಿ ದೇವರಾಜಾಚಾರಿ ಎಂಬುವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯ, 10 ಸಾವಿರ ರು. ದಂಡ ವಿಧಿಸಿರುವುದನ್ನು ಆಕ್ಷೇಪಿಸಿ ರಾಜ್ಯ ಸರ್ಕಾರ (ಅಶೋಕಪುರ ಠಾಣಾ ಪೊಲೀಸರು) ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು.

    ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವ‌ರ್ ಅವರ ನ್ಯಾಯಪೀಠ, ಗಂಧದ ಮರ ಕಳವು ಆರೋಪ ಹಾಗೂ ಆಕ್ರಮವಾಗಿ ಸಂಗ್ರಹಿಸಿದ ಅಪರಾಧ ಮೊದಲ ಬಾರಿ ಸಾಬೀತಾದಲ್ಲಿ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತಲೂ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯ್ದೆ-1963ರ ಸೆಕ್ಷನ್ 86 ಮತ್ತು 87ರಲ್ಲಿ ಸಷ್ಟವಾಗಿ ಹೇಳಲಾಗಿದೆ.

    ವಿಚಾರಣಾ ನ್ಯಾಯಾಲಯ ಆರೋಪಿಗೆ ಸೆಕ್ಷನ್ 86 (ಗಂಧದ ಮರ ಕತ್ತರಿಸಿದ) ಅಡಿಯಲ್ಲಿ 5 ವರ್ಷ ಶಿಕ್ಷೆ ಹಾಗೂ ಕೇವಲ 10 ಸಾವಿರ ರು. ದಂಡ ವಿಧಿಸಿದೆ. ಸೆಕ್ಷನ್ 87 (ಗಂಧದ ಮರ ಸಂಗ್ರಹಣೆ ಯತ್ನ) ಅಡಿಯಲ್ಲಿ ಐದು ವರ್ಷ ಜೈಲು ವಿಧಿಸಿದ್ದರೂ ಯಾವುದೇ ದಂಡ ವಿಧಿಸಿಲ್ಲ ಎಂದು ಅಭಿಪ್ರಾಯಪಟ್ಟಿತು.

    ಅಲ್ಲದೆ, ಸೆಕ್ಷನ್ ಮತ್ತು 86 ಮತ್ತು 87 ಅಡಿಯಲ್ಲಿ 50ಸಾವಿರರು.ದಂಡವಿಧಿಸುವುದನ್ನು ಕಡ್ಡಾಯಗೊಳಿಸಿರುವಾಗ, ಅದಕ್ಕಿಂತ ಕಡಿಮೆ ಪ್ರಮಾಣ ದಂಡ ವಿಧಿಸಲು ನ್ಯಾಯಾಲಯಕ್ಕೆ ಅವಕಾಶವಿರುವುದಿಲ್ಲ. ಇದರಿಂದ ಕಡಿಮೆ ದಂಡ ವಿಧಿಸಿರುವ ವಿಚಾರಣಾ ನ್ಯಾಯಾಲಯದ ಕ್ರಮ ಒಪ್ಪಲಾಗದು ಎಂದು ತಿಳಿಸಿದ ಹೈಕೋರ್ಟ್, ದೇವರಾಜಾಚಾರಿಗೆ ಸೆಕ್ಷನ್ 86 ಹಾಗೂ 87 ಅಡಿಯಲ್ಲಿ ತಲಾ 50 ಸಾವಿರ ರು. ದಂಡಕ್ಕೆ ಏರಿಸಿ ಒಟ್ಟು ಒಂದು ಲಕ್ಷಕ್ಕೆ ಆದೇಶಿಸಿತು.

    Post Views: 167

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.