ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರ ಮಾಡಿದೆ.
ನಿಫಾ ವೈರಸ್ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಸಾವನ್ನಪ್ಪಿದ್ದ. ಹೀಗಾಗಿ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಗಳಿಗಾಗಿ ಕೇರಳದಿಂದ ಅನೇಕ ಮಂದಿ ಆಗಮಿಸುತ್ತಾರೆ. ಹೀಗೆ ಆಗಮಿಸಿದವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈವರೆಗೆ ದ.ಕ ಜಿಲ್ಲೆಯಲ್ಲಿ ಯಾವುದೇ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.