ಬಂಟ್ವಾಳ: ಸಂಬಂಧಿ ಯುವತಿಯನ್ನೇ ವಿವಾಹಿತನೋರ್ವನು ಬಲವಂತವಾಗಿ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿರುವ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ ನಿವಾಸಿ ಗುರುಪ್ರಸಾದ್ ಅತ್ಯಾಚಾರಗೈದ ವಿವಾಹಿತ. ಗುರುಪ್ರಸಾದ್ ತನ್ನ ಸಂಬಂಧಿ ಯುವತಿಯನ್ನು ಕಳೆದ ಒಂದು ವರ್ಷಗಳಲ್ಲಿ ಎರಡು ಬಾರಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದ. ಪರಿಣಾಮ ಆಕೆ ಈಗ ಗರ್ಭಿಣಿಯಾಗಿದ್ದಾಳೆ. ಇದೀಗ ಸಂತ್ರಸ್ತೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಆರೋಪಿಗೆ ಈಗಾಗಲೇ ಮದುವೆಯಾಗಿದ್ದು, ಸಂತ್ರಸ್ತ ಯುವತಿಗೆ ಅನ್ಯಾಯವೆಸಗಲಾಗಿದೆ ಎಂದು ದೂರಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಗುರುಪ್ರಸಾದ್ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.