Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ 3 ವರ್ಷದಲ್ಲಿ 42,237 ಮಹಿಳೆಯರು ನಾಪತ್ತೆ : ಗೃಹ ಇಲಾಖೆಯಿಂದ ಸ್ಪೋಟಕ ಮಾಹಿತಿ ಬಹಿರಂಗ
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ 3 ವರ್ಷದಲ್ಲಿ 42,237 ಮಹಿಳೆಯರು ನಾಪತ್ತೆ : ಗೃಹ ಇಲಾಖೆಯಿಂದ ಸ್ಪೋಟಕ ಮಾಹಿತಿ ಬಹಿರಂಗ

    July 26, 2024
    Share

    ಕರ್ನಾಟಕದಲ್ಲಿ ನಾಪತ್ತೆಯಾಗುತ್ತಿರುವ ಮಹಿಳೆಯರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು ಪೊಲೀಸ್ ಇಲಾಖೆಗೂ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. 2021ರಿಂದ ಈವರೆಗೆ 3 ವರ್ಷಗಳಲ್ಲಿ ಒಟ್ಟು 42,237 ಮಹಿಳೆಯರು ನಾಪತ್ತೆಯಾಗಿರುವ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದು, ಅವರಲ್ಲಿ 39389 ಮಹಿಳೆಯರಷ್ಟೇ ಪತ್ತೆಯಾಗಿದ್ದಾರೆ ಎಂದು ಗೃಹ ಇಲಾಖೆ ಸ್ಪೋಟಕ ಮಾಹಿತಿ ಬಹಿರಂಗಗೊಳಿಸಿದೆ.

    ವಿಧಾನಸಭೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್ ಕೇಳಿರುವ ಚುಕ್ಕೆ ಗುರುತ್ತಿಲ್ಲದ ಪ್ರಶ್ನೆಗೆ ಉತ್ತರ ನೀಡಿರುವ ಗೃಹ ಇಲಾಖೆ ಈ ಆತಂಕಕಾರಿ ಮಾಹಿತಿಯನ್ನು ಒದಗಿಸಿದೆ. ಗೃಹ ಇಲಾಖೆ ನೀಡುವ ಮಾಹಿತಿಯ ಆಧಾರದಲ್ಲಿ ರಾಜ್ಯದಲ್ಲಿ ಇನ್ನೂ ಅಧಿಕೃತವಾಗಿ ಸುಮಾರು 2848 ಮಹಿಳೆಯರು ಎಲ್ಲಿದ್ದಾರೆ ಎಂಬುದೇ ಪತ್ತೆಯಾಗಿಲ್ಲ.

    ನಾಪತ್ತೆ ಆಗಿರುವವರ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು ಮಾನವ ಕಳ್ಳ ಸಾಗಣೆ ದಂಧೆ ಮೇಲೂ ನಿಗಾ ಇಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.ಕಳೆದ ಮೂರುವರೆ ವರ್ಷದಲ್ಲಿ ಒಟ್ಟು 42,237 ಮಹಿಳೆಯರ ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 39389 ಮಹಿಳೆಯರನ್ನು ಪತ್ತೆ ಹಚ್ಚಲಾಗಿದೆ. ಉಳಿದ ಮಹಿಳೆಯರು ಎಲ್ಲಿದ್ದಾರೆ ಎಂಬುವುದು ಇಂದಿಗೂ ನಿಗೂಢವಾಗಿಯೇ ಉಳಿದಿದೆ.

    ಇನ್ನು ಕಳೆದ ವರ್ಷದಿಂದ ಕೊಲೆ , ಸುಲಿಗೆ, ದರೋಡೆ, ಅಪಹರಣ, ಕಳ್ಳತನ, ಗಲಭೆ ಪ್ರಕರಣಗಳು ಸಹ ಹೆಚ್ಚುತ್ತಲೇ ಇವೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಕಳೆದ ವರ್ಷ ಅಂದರೆ 2023ರ ಜನವರಿಯಿಂದ 2024ರ ಜೂನ್ 30ರವರೆಗಿನ ಪ್ರಕರಣಗಳನ್ನು ತಾಳೆ ಹಾಕಿದಾಗ ಈ ವಿಚಾರ ಸ್ಪಷ್ಟವಾಗಿದೆ. ಒಟ್ಟು ಒಂದೂವರೆ ವರ್ಷದಲ್ಲಿ 1927 ಕೊಲೆ ಪ್ರಕರಣ, 1910 ಸುಲಿಗೆ ಪ್ರಕರಣ ಮತ್ತು 5810 ಅಪಹರಣ ಪ್ರಕರಣಗಳು ದಾಖಲಾಗಿವೆ.

    Post Views: 232

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.