Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ನಿಫಾ ಸೋಂಕಿತ ರೋಗಿಯ ಆರೈಕೆ ಮಾಡಿ ಕೋಮಾಕ್ಕೆ ಜಾರಿದ ಯುವಕ
    ಇತ್ತೀಚಿನ ಸುದ್ದಿ

    ಕಡಬ: ನಿಫಾ ಸೋಂಕಿತ ರೋಗಿಯ ಆರೈಕೆ ಮಾಡಿ ಕೋಮಾಕ್ಕೆ ಜಾರಿದ ಯುವಕ

    July 29, 2024
    Share

    ಕಡಬ: ನಿಫಾ ವೈರಸ್ ಬಾಧಿಸಿದ್ದ ರೋಗಿಗೆ ಆರೈಕೆ ನೀಡಿದ್ದ ಕಡಬದ ನರ್ಸ್ ಓರ್ವರು ನಿಫಾ ವೈರಸ್ ಗೆ ತುತ್ತಾಗಿ ಕಳೆದ ಎಂಟು ತಿಂಗಳಿನಿಂದ ಕೋಮಾದಲ್ಲಿ ದಿನ ದೂಡುತ್ತಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಸಮೀಪದ ತುಂಬ್ಯ ನಿವಾಸಿ ತೋಮಸ್ ಟಿ.ಸಿ.

    ಎಂಬವರ ಪುತ್ರ ಟಿಟ್ಟೋ ತೋಮಸ್(24) ಇದೀಗ ಜೀವನ್ಮರಣ ಸ್ಥಿತಿಯಲ್ಲಿ ದಿನದೂಡುತ್ತಿರುವ ಯುವಕ. ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್ ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ ಇಂಟರ್ನ್ಯಾಷನಲ್ ಹಾಸ್ಪಿಟಲ್ ಆಯಂಡ್ ರಿಸರ್ಚ್ ಸೆಂಟರ್ ನಲ್ಲಿ 2023 ರಿಂದ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದು, 2023 ರ ಸೆಪ್ಟೆಂಬರ್ ನಲ್ಲಿ ನಿಫಾ ವೈರಸ್ ಹೊಂದಿದ್ದ ರೋಗಿಯ ಆರೈಕೆ ಮಾಡಿದ್ದಾರೆ ಎನ್ನಲಾಗಿದೆ. ಕ್ವಾರಂಟೈನ್ ನಲ್ಲಿದ್ದ ಟಿಟ್ಟೋ ಥಾಮಸ್ ಗೆ ಎರಡು ತಿಂಗಳು ಕಳೆದ ನಂತರ ವಿಪರೀತ ತಲೆನೋವು ಕಾಣಿಸಿಕೊಂಡಿದ್ದು, ಡಿಸೆಂಬರ್ ನಲ್ಲಿ ಸ್ಕ್ಯಾನಿಂಗ್ ನಡೆಸಿದಾಗ ಮಿದುಳಿನ ಸ್ಟ್ರೋಕ್‌ಗೆ ತುತ್ತಾಗಿರುವುದು ತಿಳಿದು ಬಂದಿದ್ದು, ಮರುದಿನವೇ ಕೋಮಾಗೆ ಜಾರಿದ್ದಾರೆ ಎನ್ನಲಾಗಿದೆ. ನಂತರದ ದಿನಗಳಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿಯ ವತಿಯಿಂದಲೇ ಚಿಕಿತ್ಸೆ ನೀಡಲಾಗಿದ್ದು, ಕಳೆದ ಎಂಟು ತಿಂಗಳಲ್ಲಿ ಯಾವುದೇ ಫಲ ಕಾಣದ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿಚಾರಿಸಿದಾಗ ಆಡಳಿತ ಮಂಡಳಿಯು ಈಗಾಗಲೇ 40 ಲಕ್ಷ ರೂ.ಗಳಷ್ಟು ಖರ್ಚನ್ನು ಭರಿಸಿದ್ದು, ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಇನ್ಮುಂದೆ ನಿಭಾಯಿಸುವುದು ಕಷ್ಟ ಎಂದು ಪ್ರತಿಕ್ರಿಯೆ ನೀಡಿದೆ.

    ನಿಫಾ ವೈರಸ್ ಬಾಧಿಸಿರುವ ಹಿನ್ನೆಲೆಯಲ್ಲಿ ಅತ್ಯುನ್ನತ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡುವಂತೆ ಆಗ್ರಹಿಸಿ ಕುಟುಂಬಸ್ಥರು ಕೇರಳ ಸರಕಾರದ ಮೊರೆ ಹೋಗಿದ್ದು, ಸರಕಾರದ ಪ್ರತಿಕ್ರಿಯೆ ಇನ್ನಷ್ಟೇ ಬರಬೇಕಿದೆ.

    ನಿಫಾ ಸೋಂಕಿನಿಂದ ತತ್ತರಿಸಿರುವ ಟಿಟ್ಟೋ ಥಾಮಸ್ ನ ಪ್ರಾಣ ಉಳಿಸುವ ಸಲುವಾಗಿ ತಂದೆ, ತಾಯಿ ಹಾಗೂ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಸಹೋದರ ಕಳೆದ ಎಂಟು ತಿಂಗಳಿನಿಂದ ತಮ್ಮೆಲ್ಲಾ ಕೆಲಸಗಳನ್ನು ಬಿಟ್ಟು ಆಸ್ಪತ್ರೆಗೆ ಅಲೆದಾಡುವುದೇ ದೈನಂದಿನ ಕಾಯಕವಾಗಿದೆ. ರೋಗಿಯೊಬ್ಬರ ಆರೈಕೆ ಮಾಡುತ್ತಿದ್ದ ಪದವೀಧರ ಯುವಕ ಇದೀಗ ತಾನೇ ಮಾರಕ ರೋಗಕ್ಕೆ ತುತ್ತಾಗಿ ಕಳೆದ ಎಂಟು ತಿಂಗಳುಗಳಿಂದ ಬೇರೆಯವರ ಆರೈಕೆಯಲ್ಲಿ ದಿನ ದೂಡುವುದು ಕುಟುಂಬಸ್ಥರನ್ನು ಚಿಂತಾಕ್ರಾಂತರನ್ನಾಗಿಸಿದೆ. ಜೊತೆಗೆ ವೈದ್ಯ ಲೋಕಕ್ಕೂ ಇದೊಂದು ಸವಾಲಾಗಿದೆ.

    ಕಳೆದ ಎಂಟು ತಿಂಗಳ ಹಿಂದೆ ಕೋಮಾವಸ್ಥೆಗೆ ಜಾರಿದ ತಮ್ಮನ ಆರೋಗ್ಯ ಇಂದಲ್ಲ ನಾಳೆ ಸರಿಯಾಗಬಹುದೆಂಬ ಭರವಸೆಯಲ್ಲಿ ಇಷ್ಟು ಸಮಯ ಕಾದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಸರಕಾರದ ಗಮನಕ್ಕೆ ತರಬೇಕಾದ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಯಲ್ಲಿ ನಿಲ್ಲಬೇಕಾದ ಅನಿವಾರ್ಯತೆಯಿಂದ ಕೈಲಿದ್ದ ಕೆಲಸಕ್ಕೂ ರಾಜೀನಾಮೆ ನೀಡಿ ಆಸ್ಪತ್ರೆಯಲ್ಲೇ ಉಳಿಯುವಂತಾಗಿದ್ದು, ಕೇರಳ ಸರಕಾರವು ಉನ್ನತ ಮಟ್ಟದ ಚಿಕಿತ್ಸೆಗೆ ನೆರವಾದರೆ ನನ್ನ ಸಹೋದರನ ಪ್ರಾಣ ಉಳಿಸಬಹುದಾಗಿದೆ.

    Post Views: 205

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.