Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಾಹನಗಳ ವೇಗ ಪತ್ತೆ ಮಾಡುವುದಕ್ಕಾಗಿ “ರಾಡಾರ್ ಗನ್” ಕಾರ್ಯಾಚರಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ವಾಹನಗಳ ವೇಗ ಪತ್ತೆ ಮಾಡುವುದಕ್ಕಾಗಿ “ರಾಡಾರ್ ಗನ್” ಕಾರ್ಯಾಚರಣೆ

    July 30, 2024
    Share

    ಮಂಗಳೂರು: ವಾಹನಗಳ ವೇಗ ಪತ್ತೆ ಮಾಡುವುದಕ್ಕಾಗಿ ಪೊಲೀಸರು ‘ಮೊಬೈಲ್ ಸ್ಪೀಡ್ ಡಿಟೆಕ್ಷನ್ ರಾಡಾರ್ ಗನ್’ಗಳ ಬಳಕೆ ಆರಂಭಿಸಿದ್ದು, ಸೋಮವಾರ ಹಲವು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

    ಅಪಘಾತ ಗಳನ್ನು ತಡೆಯಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೊರಡಿಸಿರುವ ವಾಹನಗಳ ವೇಗಮಿತಿ ಅಧಿಸೂಚನೆಯಂತೆ ದ.ಕ. ಜಿಲ್ಲಾ ಪೊಲೀಸರು 5 “ಮೊಬೈಲ್ ಸ್ಪೀಡ್ ಡಿಟೆಕ್ಷನ್ ರಾಡಾರ್ ಗನ್’ಗಳೊಂದಿಗೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ವಾಹನಗಳ ವೇಗ ಪತ್ತೆ ಮಾಡಲು ಪೊಲೀಸರಿಗೆ ಒದಗಿಸಲಾಗಿರುವ ರಾಡಾರ್ ಗನ್ ಕನಿಷ್ಠ 100 ಮೀಟರ್ ಅಂತರದಲ್ಲಿ ವಾಹನಗಳ ವೇಗವನ್ನು ಪತ್ತೆ ಹಚ್ಚುತ್ತದೆ.ಮಂಗಳೂರು ನಗರ ಭಾಗ ಸೇರಿ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿಯೂ ರಾಡಾರ್ ಗನ್ ಬಳಸಿ ಕಾರ್ಯಾಚರಣೆ ಆರಂಭಿಸಲಾಗಿದ್ದು, ಈಗಾಗಲೇ 10ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಕಮಿಷನರೆಟ್ ವ್ಯಾಪ್ತಿಗೆ ಇಂತಹ 3 ಗನ್‌ಗಳನ್ನು ಒದಗಿಸಲಾಗಿದೆ.ಸೋಮವಾರ ಬಂಟ್ವಾಳ ಸಂಚಾರ ಪೊಲೀಸರು ರಾ.ಹೆ.75ರ ತುಂಬೆ ರಾಮಲ್‌ಕಟ್ಟೆ ಭಾಗದಲ್ಲಿ ಸ್ಪೀಡ್ ಡಿಟೆಕ್ಷನ್ ರಾಡಾರ್ ಗನ್ ಕೆಮರಾ ಬಳಸುವ ಮೂಲಕ ವಾಹನಗಳ ವೇಗವನ್ನು ಪತ್ತೆ ಹಚ್ಚಿ ದಂಡ ವಸೂಲಿ ಮಾಡಿದರು. ಬಂಟ್ವಾಳ ಸಂಚಾರ ಠಾಣೆ ಪಿಎಸ್‌ಐ ಸುತೇಶ್ ಕೆ.ಪಿ. ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಮೊದಲ ದಿನ 62 ಪ್ರಕರಣಗಳು ದಾಖಲಾಗಿದ್ದು, 65 ಸಾವಿರ ರೂ. ದಂಡ ಸಂಗ್ರಹಿಸಲಾಗಿದೆ.ಬಂಟ್ವಾಳ ಪೊಲೀಸರು ದಂಡ ವಿಧಿಸಿದ ಹೆದ್ದಾರಿ ಪ್ರದೇಶದಲ್ಲಿ ವೇಗದ ಮಿತಿ ೫೦ ಕಿ.ಮೀ. ಆಗಿದೆ. ಆದರೆ ಈ ಭಾಗದ ಬಹುತೇಕ ಫಲಕಗಳು ಕಿತ್ತು ಹೋಗಿವೆ. ಇರುವ ಕೆಲ ಫಲಕಗಳಲ್ಲಿ ಕೊಳೆ ತುಂಬಿ ಸ್ಪಷ್ಟವಾಗಿ ಕಾಣುತ್ತಿಲ್ಲ. ಹೀಗಾಗಿ ಫಲಕಗಳನ್ನು ಸರಿಯಾಗಿ ಪ್ರದರ್ಶಿಸದೆ ದಂಡ ವಸೂಲಿ ಮಾಡಿರುವ ಬಗ್ಗೆ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.

    Post Views: 284

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.