Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ: ನಾಲ್ವರು ಮುಸುಕುಧಾರಿಗಳಿಂದ ಶಸ್ತ್ರಸಜ್ಜಿತವಾಗಿ ದರೋಡೆಗೆ ಯತ್ನ..! ದೃಶ್ಯ ಸಿಸಿಟಿವಿಯಲ್ಲಿ ಸೆರೆ
    Uncategorized

    ಉಡುಪಿ: ನಾಲ್ವರು ಮುಸುಕುಧಾರಿಗಳಿಂದ ಶಸ್ತ್ರಸಜ್ಜಿತವಾಗಿ ದರೋಡೆಗೆ ಯತ್ನ..! ದೃಶ್ಯ ಸಿಸಿಟಿವಿಯಲ್ಲಿ ಸೆರೆ

    August 2, 2024
    Share

    ಉಡುಪಿ: ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ. ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ ಫ್ಲಾಟ್‌ನಲ್ಲಿ ವಯಸ್ಸಾದ ದಂಪತಿಗಳು ವಾಸಿಸುತ್ತಿದ್ದರು. ಈ ದಂಪತಿಗಳು ಒಂದು ವಾರದ ಹಿಂದಷ್ಟೇ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಇದೀಗ ಈ ದಂಪತಿಗಳ ಫ್ಲಾಟ್‌ಗೆ ಮುಸುಕುಧಾರಿಗಳು ನುಗ್ಗಲು ಪ್ರವೇಶಿಸುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ನಾಲ್ವರು ಶಸ್ತ್ರಸಜ್ಜಿತ ಮುಸುಕುಧಾರಿಗಳು ಹಲವಾರು ಖಾಲಿ ಅಪಾರ್ಟ್ ಮೆಂಟ್‌ಗಳಿಗೆ ನುಗ್ಗಿ ಬೆಲೆಬಾಳುವ ವಸ್ತುಗಳ ಹುಡುಕಾಡುವ ಜೊತೆಗೆ ಅಪಾರ ಹಾನಿಯನ್ನುಂಟು ಮಾಡಿರುತ್ತಾರೆ. ಇನ್ನು ಈ ನಾಲ್ವರು ಒಂದೇ ಬಡಾವಣೆಯ ಒಟ್ಟು ಮೂರು ಅಪಾರ್ಟ್ ಮೆಂಟ್‌ ಕಟ್ಟಡಗಳಲ್ಲಿ ದರೋಡೆಗೆ ಯತ್ನಿಸಿದ್ದರು ಎನ್ನಲಾಗಿದೆ.

    Post Views: 258

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.