Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾರು ಹಾಗೂ ಅಕ್ಟೀವಾ ನಡುವೆ ಅಪಘಾತ- ಶಾಲಾ ಶಿಕ್ಷಕಿ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಕಾರು ಹಾಗೂ ಅಕ್ಟೀವಾ ನಡುವೆ ಅಪಘಾತ- ಶಾಲಾ ಶಿಕ್ಷಕಿ ಮೃತ್ಯು

    August 17, 2024
    Share

    ಮಂಗಳೂರು: ನಗರದ ಬಂದರಿನಲ್ಲಿ ಕಾರು ಹಾಗೂ ಅಕ್ಟೀವಾ ನಡುವೆ ನಡೆದ ಅಪಘಾತದಲ್ಲಿ ಶಾಲಾ ಶಿಕ್ಷಕಿಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ.

    ಕಸಬಾ ಬೆಂಗ್ರೆಯ ಖಾಸಗಿ ಶಾಲೆ ಶಿಕ್ಷಕಿ ಕೆ.ಪಿ.ಶಾಹೀದಾ  ಮೃತಪಟ್ಟ  ದುರ್ದೈವಿಯಾಗಿದ್ದಾರೆ.

    ಶಾಹೀದಾ ಅವರು ತನ್ನ ಮನೆಯಿಂದ ಶಾಲೆಗೆ ತೆರಳುವಾಗ ಬಂದರ್‌ನಲ್ಲಿ ಈ ಅಪಘಾತ ನಡೆದಿತ್ತು.  ಅಕ್ಟೀವಾ – ಕಾರು ನಡುವೆ ನಡೆದ ಅಪಘಾತದಲ್ಲಿ  ಶಿಕ್ಷಕಿ ಶಾಹೀದಾ ಮೃತಪಟ್ಟಿದ್ದಾರೆ.

    ಮೂಲತಃ ಪುತ್ತೂರಿನ ಪರ್ಲಡ್ಕ ಸಮೀಪದ ಕುಂಜೂರು ನಿವಾಸಿಯಾಗಿದ್ದ ಪ್ರಸ್ತುತ  ಬೆಂಗ್ರೆ ನಿವಾಸಿಯಾಗಿರುವ ಬಹುಃ ಕೆ.ಪಿ.ಇಸ್ಮಾಯಿಲ್ ಉಸ್ತಾದ್ ರವರ ಮಗಳು. ಉಳ್ಳಾಲ ಪೊಲೀಸ್ ಠಾಣೆಯ ASI ಮುಹಮ್ಮದ್ ಅವರ ಪತ್ನಿಯಾಗಿರುವ ಶಾಹಿದಾ ಒಬ್ಬ ಪುತ್ರ ಮತ್ತು ಇಬ್ಬರು ಹೆಣ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

    ಇವರು ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವುದು, ಕಲಿಕೆಯಲ್ಲಿ ತೀರಾ ಹಿಂದುಳಿದಿದ್ದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡುವುದು, ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು, ವಿದ್ಯಾರ್ಥಿವೇತನ ದೊರಕಿಸಿಕೊಡುವುದು ಇತ್ಯಾದಿಯಾಗಿ ಸಮಾಜ ಸೇವೆಯಲ್ಲಿ ನಿರತರಾಗಿದ್ದರು.ಮಂಗಳೂರು ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲೂ ಇವರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಸ್ಪರ್ಧಿಸಿದ್ದರು.

    Post Views: 191

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.