ಮಂಗಳೂರು : ಮಂಗಳೂರಿನಲ್ಲಿ ರಾಜ್ಯಪಾಲರ ವಿರುದ್ದ ಜಿಲ್ಲಾ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕೊಂಚ ಉದ್ರಿಕ್ತಗೊಂಡು ಬಸ್‌ಗಳಿಗೆ ಕಲ್ಲು ತೂರಾಟ, ಟೈರ್ ಗಳಿಗೆ ಬೆಂಕಿ ಹಚ್ಚಿ್ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾ ಕೇಂದ್ರ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೆರವಣಿಗೆ ನಡೆಸಿ , ಪಾಲಿಕೆ ಎದುರು ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ಸಂದರ್ಭ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭ ಪ್ರತಿಭಟನೆ ಉದ್ವಿಗ್ನಗೊಂಡ ಕಾರ್ಯಕರ್ತರಿಂದ ರಸ್ತೆಯಲ್ಲಿ ಸಾಗುತ್ತಿದ್ದ ಖಾಸಾಗಿ ಸಿಟಿ ಬಸ್ ಗೆ ಕಲ್ಲು ತೂರಾಟ ನಡೆಸಲಾಗಿದ್ದು ಇದರಿಂದ ಬಸ್ ನ ಮುಂಭಾಗದ ಗಾಜು ಹುಡಿಯಾಗಿದೆ. ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನನಾಕರರನ್ನು ಹತೋಟಿಗೆ ತಂದಿದ್ದಾರೆ.
‘ಬಸ್ನಲ್ಲಿ ಹತ್ತು ಮಂದಿ ಪ್ರಯಾಣಿಕರಿದ್ದರು. ಚಾಲಕ ಸೀಟಿನ ಹಿಂದೆ ಕುಳಿತ್ತಿದ್ದ ಮಹಿಳೆಗೆ ಗಾಯವಾಗಿದೆ. ನಾಲ್ವರು ಸೇರಿ ಕಲ್ಲು ತೂರಿದ್ದಾರೆ. ಈ ಬಸ್ ನೌಫಾಲ್ ಎಂಬ ಬಿಜೆಪಿ ನಾಯಕರಿಗೆ ಸೇರಿದ್ದು. ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ನಡೆಸಲಾಗಿದೆ’ ಎಂದು ಬಸ್ ಸಿಬ್ಬಂದಿ ತಿಳಿಸಿದರು. ಇದೇ ಸಂದರ್ಭ ಟೈರುಗಳಿಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.