Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರು ಬಳಿಕ ಮಲೆನಾಡು ಕಂಬಳಕ್ಕೆ ಭರದ ಸಿದ್ಧತೆ..!
    ಇತ್ತೀಚಿನ ಸುದ್ದಿ

    ಬೆಂಗಳೂರು ಬಳಿಕ ಮಲೆನಾಡು ಕಂಬಳಕ್ಕೆ ಭರದ ಸಿದ್ಧತೆ..!

    August 20, 2024
    Share

    ಮಂಗಳೂರು: ಕರಾವಳಿಯ ಹೆಸರಾಂತ ಜಾನಪದ ಕ್ರೀಡೆ ಕಂಬಳ ಕಳೆದ ವರ್ಷ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನೆರವೇರಿದ ಬಳಿಕ ಇದೇ ಮೊದಲ ಬಾರಿಗೆ ಮಲೆನಾಡಿಗೂ ವಿಸ್ತರಿಸಲು ಸನ್ನದ್ಧವಾಗಿದ್ದು, ಅದಕ್ಕಾಗಿ ಈಗಲೇ ಪೂರಕ ಸಿದ್ಧತೆ ನಡೆದಿದೆ.


    ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ, ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3181 ಮತ್ತು 3182 ಹಾಗೂ ಶಿವಮೊಗ್ಗ ಕಂಬಳ ಸಮಿತಿಯನ್ನು ರಚಿಸಿ ಇದರ ಸಹಯೋಗದೊಂದಿಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ 2025ರ ಏಪ್ರಿಲ್ 19 ಮತ್ತು 20ರಂದು ಆಯೋಜಿಸಲಾಗುವುದು ಎಂದು ದ.ಕ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


    ಕರಾವಳಿ ಕರ್ನಾಟಕದ ಜಾನಪದ ಕ್ರೀಡೆಯನ್ನು ವಿಶ್ವ ಪಾರಂಪರಿಕ ತಾಣವಾದ ಶಿವಮೊಗ್ಗದಲ್ಲಿ ನಡೆಸಲು ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸೇರಿದಂತೆ ಎಲ್ಲರ ಪೂರಕ ನೆರವು ಪಡೆಯಲಾಗುವುದು. ಶಿವಮೊಗ್ಗ, ಹಾಸನ, ಮಡಿಕೇರಿ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬೈಂದೂರು, ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ ಸಹಭಾಗಿತ್ವದಲ್ಲಿ ಅದ್ಧೂರಿಯಾಗಿ ಕಂಬಳ ನಡೆಸಲಾಗುವುದು ಎಂದರು.


    ಕಂಬಳಕ್ಕೆ ಬೇಕಾದ ವ್ಯವಸ್ಥೆ ಬಗ್ಗೆ ನಮ್ಮ ತಂಡ ಶಿವಮೊಗ್ಗಕ್ಕೆ ತೆರಳಿ ಪರಿಶೀಲನೆ ನಡೆಸಲಿದೆ. ಅತ್ಯಂತ ಶಿಸ್ತುಬದ್ಧವಾಗಿ ನಡೆಯಲಿದೆ ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
    ಈ ಬಾರಿ 25 ಕಂಬಳ: ಕರಾವಳಿಯಲ್ಲಿ ಈ ಬಾರಿ 25 ಕಂಬಳ ಆಯೋಜಿಸಲು ತೀರ್ಮಾನಿಸಲಾಗಿದೆ. ದಿನಾಂಕವನ್ನೂ ನಿಗದಿ ಮಾಡಲಾಗಿದೆ ಎಂದರು. ಕಂಬಳ ಸಮಿತಿಯ ಭಾಸ್ಕರ ಕೋಟ್ಯಾನ್, ಜಿ.ಆರ್. ಶೆಟ್ಟಿ, ಅರುಣ್ ಶೆಟ್ಟಿ, ರೋಟರಿಯ ಜಗನ್ನಾಥ್ ಕೋಟೆ, ರಾಜ್ ಗೋಪಾಲ ರೈ, ವಿಕ್ರಂ ದತ್, ಇಲಿಯಾಸ್ ಇದ್ದರು.

    Post Views: 254

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.