Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಕಾರಾಗೃಹ ಅವ್ಯವಹಾರ ಪ್ರಕರಣ – ಮೂರು ಪ್ರತ್ಯೇಕ ತನಿಖಾ ತಂಡ ರಚನೆ
    ಇತ್ತೀಚಿನ ಸುದ್ದಿ

     ಕಾರಾಗೃಹ ಅವ್ಯವಹಾರ ಪ್ರಕರಣ – ಮೂರು ಪ್ರತ್ಯೇಕ ತನಿಖಾ ತಂಡ ರಚನೆ

    August 27, 2024
    Share

    ಬೆಂಗಳೂರು: ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ಪ್ರಕರಣದ ತನಿಖೆಗೆ 3 ವಿಶೇಷ ತಂಡಗಳನ್ನ ರಚಿಸಲಾಗಿದೆ. ಕಾರಾಗೃಹದ ನಿಯಮಗಳನ್ನ ಉಲ್ಲಘಿಸಿರುವ ಆರೋಪದಡಿ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2 ಪ್ರಕರಣಗಳಲ್ಲಿ ದರ್ಶನ್​ ಅವರೇ ಪ್ರಮುಖ ಆರೋಪಿಯಾಗಿದ್ದಾರೆ. ಮೂರೂ ಪ್ರಕರಣಗಳ ತನಿಖೆಗಾಗಿ ಪ್ರತ್ಯೇಕ‌ ತಂಡಗಳನ್ನ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ರಚಿಸಿದ್ದಾರೆ. ಮೊದಲನೇ ಪ್ರಕರಣದ ತನಿಖೆಯನ್ನ ಬೇಗೂರು ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ನಡೆಸಲಿದ್ದಾರೆ. ದರ್ಶನ್ ಅವರು ಜೈಲಿನ ಲಾನ್​ನಲ್ಲಿ ರೌಡಿಶೀಟರ್ಸ್ ಜೊತೆ ಕುಳಿತು ಕಾಫಿ ಕುಡಿಯುತ್ತ ಸಿಗರೇಟ್ ಸೇದುತ್ತಿದ್ದುದರ ಕುರಿತು ತನಿಖೆ ನಡೆಯಲಿದ್ದು, ಲಾನ್​ನಲ್ಲಿ ಎಲ್ಲರೂ ಒಟ್ಟಿಗೆ ಕೂರಲು ಕುರ್ಚಿಗಳ ವ್ಯವಸ್ಥೆ ಮಾಡಿದವರು ಯಾರು? ಕಾಫಿ ಮಗ್ ಕೊಟ್ಟವರು ಯಾರು? ಸಿಗರೇಟ್, ಮದ್ಯ, ಮಾದಕವಸ್ತುಗಳು ಜೈಲಿನಲ್ಲಿ ನಿಷೇಧವಿದ್ದರೂ ಸಿಕ್ಕಿದ್ದು ಹೇಗೆ ಎಂದು ತನಿಖೆ ನಡೆಯಲಿದೆ. ಎರಡನೇ ಪ್ರಕರಣದ ತನಿಖೆಯ ಜವಾಬ್ದಾರಿಯನ್ನ ಹುಳಿಮಾವು ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಕುಮಾರಸ್ವಾಮಿಯವರಿಗೆ ವಹಿಸಲಾಗಿದೆ. ಮೊಬೈಲ್ ಫೋನ್​ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಣದ ಬಗ್ಗೆ ತನಿಖೆ ನಡೆಯಲಿದ್ದು, ಫೋಟೋ ತೆಗೆದಿದ್ದು ಯಾರು? ಆರೋಪಿಗಳು ವಿಡಿಯೋ ಕರೆ ಮಾಡಿದ್ದು ಯಾರಿಗೆ? ಜೈಲಿನಲ್ಲಿ ಮೊಬೈಲ್ ಬಳಕೆ ನಿಷೇಧವಿದ್ದರೂ ಸಹ ಮೊಬೈಲ್ ಸಿಕ್ಕಿದ್ದು ಹೇಗೆ.? ಒದಗಿಸಿದವರು ಯಾರು? ಜಾಮರ್ ವ್ಯವಸ್ಥೆ ಇದ್ದರೂ ಸಹ ಸಂಪರ್ಕ ಸಾಧ್ಯವಾಗಿದ್ದು ಹೇಗೆ ಎಂಬುದರ ಕುರಿತು ತನಿಖೆ ನಡಯಲಿದೆ. ಮೂರನೇ ಪ್ರಕರಣದ ತನಿಖೆಯನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್​ ಠಾಣೆಯ ಎಸಿಪಿ ಮಂಜುನಾಥ್ ನೇತೃತ್ಚದ ತಂಡ ನಡೆಸಲಿದೆ. ಜೈಲು ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ತನಿಖೆ ನಡೆಯಲಿದೆ. ಆರೋಪಿಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಿದರು ಯಾರು? ಜೈಲಧಿಕಾರಿಗಳ ಗಮನಕ್ಕೆ ಬಾರದೆ ಇಷ್ಟೆಲ್ಲವೂ ಸಾಧ್ಯವಾಯಿತಾ ಎಂಬುದರ ಕುರಿತು ಸಮಗ್ರ ತನಿಖೆ ನಡೆಯಲಿದೆ.

    Post Views: 239

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.