ಬೆಂಗಳೂರು: ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, 18 ದಿನಗಳಲ್ಲಿ 910 ಮಂದಿಗೆ ಡೆಂಘಿ ಜ್ವರ ಕಾಣಿಸಿಕೊಂಡಿದ್ದು, ಒಟ್ಟೂ ಪ್ರಕರಣಗಳ ಸಂಖ್ಯೆ 3,384ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡದಲ್ಲಿ 176, ಉಡುಪಿ 356, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 585, ಮೈಸೂರು 349, ಚಿತ್ರದುರ್ಗ 163, ಶಿವಮೊಗ್ಗ 158, ಹಾಸನ 124, ದಾವಣಗೆರೆ 114, ವಿಜಯಪುರ 110, ಬೆಳಗಾವಿ 103, ಕಲಬುರಗಿ 101, ಕೊಪ್ಪಳ 100 ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಘಿ ಪ್ರಕರಣಗಳು ವರದಿಯಾಗಿವೆ.
ಇನ್ನು ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ಹೆಚ್ಚಿನ ಜನರಲ್ಲಿ ಡೆಂಘಿ ಜ್ವರ ಕಾಣಿಸಿಕೊಳ್ಳುತ್ತಿದ್ದು, ಈ ವರ್ಷ ಜ.1 ರಿಂದ ಜೂ. 24ರವರೆಗೆ 62,357 ಡೆಂಘಿ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 26,719 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. 3,384 ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ