Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»“ಯುದ್ಧ ಯಾವಾಗ ಬೇಕಾದರೂ ಬರಬಹುದು, ಸಿದ್ಧವಾಗಿರಿ’ : ರಾಜನಾಥ್ ಸಿಂಗ್
    ಇತ್ತೀಚಿನ ಸುದ್ದಿ

    “ಯುದ್ಧ ಯಾವಾಗ ಬೇಕಾದರೂ ಬರಬಹುದು, ಸಿದ್ಧವಾಗಿರಿ’ : ರಾಜನಾಥ್ ಸಿಂಗ್

    September 8, 2024
    Share

    ಲಖನೌ : ದೇಶದಲ್ಲಿ ಶಾಂತಿ ಕಾಪಾಡಿಕೊಳ್ಳಲು ಸೇನಾಪಡೆಗಳು ಯುದ್ಧಕ್ಕೂ ಸಿದ್ಧವಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಗುರುವಾರ ಕರೆ ನೀಡಿದ್ದಾರೆ. ಸೇನೆಯ ಮೂರು ಪಡೆಗಳ ಕಮಾಂಡರ್‌ಗಳು ಇದೇ ಮೊದಲ ಬಾರಿಗೆ ಆಯೋಜಿಸಿರುವ ಜಂಟಿ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಭಾರತ ಶಾಂತಿ ಪ್ರಿಯ ರಾಷ್ಟ್ರ. ಹಾಗಾಗಿ, ಶಾಂತಿ ಕಾಪಾಡಿಕೊಳ್ಳಲು ಸೇನೆಯು ಯುದ್ಧಕ್ಕೂ ಸಿದ್ಧವಿರಬೇಕು. ಭವಿಷ್ಯದಲ್ಲಿ ಎದುರಾಗಬಹುದಾದ ಭದ್ರತಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮೂರು ಸೇನಾಪಡೆಗಳು ಜಂಟಿಯಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಒತ್ತಿ ಹೇಳಿದರು. ರಷ್ಯಾ–ಉಕ್ರೇನ್‌ ಯುದ್ಧ, ಹಮಾಸ್‌ ಹಾಗೂ ಇಸ್ರೇಲ್‌ ನಡುವಿನ ಸಮರ ಹಾಗೂ ಬಾಂಗ್ಲಾದೇಶದಲ್ಲಿನ ಬೆಳವಣಿಗೆಗಳನ್ನು ಉಲ್ಲೇಖಿಸಿದ ಸಚಿವರು, ಅವುಗಳ ವಿವಿಧ ಆಯಾಮಗಳನ್ನು ಅಧ್ಯಯನ ಮಾಡಿ ಭವಿಷ್ಯದಲ್ಲಿ ಬಂದೊದಗಬಹುದಾದ ಅನಿರೀಕ್ಷಿತ ಸವಾಲುಗಳನ್ನು ಎದುರಿಸಲು ಸಿದ್ಧವಿರಬೇಕು ಎಂದರು. ಜಾಗತಿಕ ಚಂಚಲತೆಯ ಹೊರತಾಗಿಯೂ ಭಾರತವು ಶಾಂತಿಯುತವಾಗಿ ಅಭಿವೃದ್ಧಿ ಸಾಧಿಸುತ್ತಿದೆ. ಹಾಗಿದ್ದರೂ, ಸವಾಲುಗಳು ಹೆಚ್ಚಾಗುತ್ತಲೇ ಇದ್ದು, ನಾವು ಎಚ್ಚರವಾಗಿರಬೇಕಾದ್ದು ಅವಶ್ಯ ಎಂದು ಹೇಳಿದರು. ಸೇನಾಪಡೆಗಳಲ್ಲಿ ಸಾಂಪ್ರದಾಯಿಕ ಹಾಗೂ ಆಧುನಿಕ ಶಸ್ತ್ರಾಸ್ತ್ರಗಳನ್ನು ಸಮತೋಲಿತವಾಗಿ ಸಂಗ್ರಹಿಸಿಟ್ಟುಕೊಳ್ಳಬೇಕು. ದತ್ತಾಂಶ ನಿರ್ವಹಣೆ ಹಾಗೂ ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿನ ಅತ್ಯಾಧುನಿಕ ತಾಂತ್ರಿಕತೆಯನ್ನು ಸೇನಾಪಡೆಗಳು ಹೆಚ್ಚಾಗಿ ಬಳಸಿಕೊಳ್ಳಬೇಕಾದ ಮಹತ್ವ ಹೇಳಿದರು. ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾನ್‌, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ದಿನೇಶ್‌ ಕೆ. ತ್ರಿಪಾಠಿ, ವಾಯುಪಡೆಯ ಮುಖ್ಯಸ್ಥ ಚೀಫ್‌ ಮಾರ್ಷಲ್‌ ವಿ.ಆರ್‌. ಚೌಧರಿ ಹಾಗೂ ರಕ್ಷಣಾ ಕಾರ್ಯದರ್ಶಿ ಗಿರಿಧರ್‌ ಅರಮನೆ ಜಂಟಿ ಸಮ್ಮೇಳನದಲ್ಲಿ ಭಾಗಿಯಾಗಿದ್ದರು.

    Post Views: 298

    Related Posts

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.