Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಸ್ತೆ ಗುಂಡಿ ಮುಚ್ಚಲು ಸೆ.15ರವರೆಗೆ ಗಡು, ವಿಫಲವಾದರೆ ಸಸ್ಪೆಂಡ್ ಫಿಕ್ಸ್!!
    ಇತ್ತೀಚಿನ ಸುದ್ದಿ

    ರಸ್ತೆ ಗುಂಡಿ ಮುಚ್ಚಲು ಸೆ.15ರವರೆಗೆ ಗಡು, ವಿಫಲವಾದರೆ ಸಸ್ಪೆಂಡ್ ಫಿಕ್ಸ್!!

    September 9, 2024
    Share

    ಸೆಪ್ಟೆಂಬರ್‌ 15ರೊಳಗೆ ನಗರದ ಎಲ್ಲಾ ರಸ್ತೆಗಳು ಗುಂಡಿಗಳಿಂದ ಮುಕ್ತವಾಗಿರಬೇಕು. ಇಲ್ಲದಿದ್ದರೆ ಆ್ಯಕ್ಷನ್ ಗ್ಯಾರಂಟಿ ಎಂದು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಹಿರಿಯ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆ ಮೇರೆಗೆ ಎಲ್ಲ ವಾರ್ಡ್‌ಗಳಲ್ಲಿ ಗುಂಡಿಗಳನ್ನು ತುಂಬುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಉಳಿದ ಕಾಮಗಾರಿಗಳನ್ನು ಬದಿಗೊತ್ತಿ ನಗರದಲ್ಲಿ ಗುಂಡಿಗಳು ಬಾರದಂತೆ ಕಾಮಗಾರಿಗಳ ಕೈಗೊಳ್ಳುವಂತೆ ಸೂಚಿಸಲಾಗಿದೆ. ನಗರದ ರಸ್ತೆಗಳನ್ನು ಗುಂಡಿ ಮುಕ್ತ ಮಾಡಲು ವಾರ್ಡ್ ಮಟ್ಟದ ಎಲ್ಲಾ ಅಧಿಕಾರಿಗಳು, ಅವರ ಶ್ರೇಣಿಯನ್ನು ಲೆಕ್ಕಿಸದೆ, ಕೆಲಸಕ್ಕಿಳಿದು ಕಾಮಗಾರಿಗಳ ಮೇಲ್ವಿಚಾರಣೆ ಮಾಡಬೇಕು. ಸಾರ್ವಜನಿಕರಿಂದ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

    ಇತ್ತೀಚೆಗಷ್ಟೇ ಮರ ಬಿದ್ದು ಇಬ್ಬರು ಆಟೋ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಇನ್ನು ಮುಂದೆ ಮರ ಬೀಳದಂತೆ ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ

    ಸೆಪ್ಟೆಂಬರ್‌ನಲ್ಲಿ ಹಠಾತ್ ಮಳೆಯಾಗುವ ನಿರೀಕ್ಷೆಯಿರುವುದರಿಂದ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗುವ ಮತ್ತು ಕೆಲವು ಪ್ರದೇಶಗಳಲ್ಲಿ ಜಲಾವೃತವಾಗುವ ಸಾಧ್ಯತೆಗಳಿವೆ. ಈ ಕುರಿತು ಕ್ರಮಕೈಗೊಳ್ಳಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

    ಗಾಂಧಿ ಜಯಂತಿಯಂದು ನಗರದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳನ್ನು ಸೇರಿಸಿ ಬೃಹತ್ ಸ್ವಚ್ಛತಾ ಜಾಗೃತಿ ಅಭಿಯಾನ ನಡೆಸಲಾಗುವುದು. ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದಾಗಿ ಪ್ರತಿಜ್ಞೆ ಮಾಡಲಿದ್ದಾರೆ ಎಂದು ಇದೇ ವೇಳೆ ಮಾಹಿತಿ ನೀಡಿದರು.

    ಸೆ.1ರಂದು ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಡಿಸಿಎಂ, ಗುಂಡಿಗಳನ್ನು ತುಂಬಿಸಲು 15 ದಿನಗಳ ಗಡುವು ನೀಡಿದ್ದರು.

    Post Views: 227

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.