Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಬೆಳ್ತಂಗಡಿ: ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
    Uncategorized

    ಬೆಳ್ತಂಗಡಿ: ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

    September 22, 2024
    Share

    ಬೆಳ್ತಂಗಡಿ; 2022ರ ಅ.9ರಂದು ಬೆಳ್ತಂಗಡಿಯಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಫೋಕ್ಸೋ ನ್ಯಾಯಾಲಯವು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ಸದಾಶಿವ ಎಂಬಾತ 2022ರ ಅ.9ರಂದು ಬೆಳಗ್ಗೆ 10ಕ್ಕೆ ಬೆಳ್ತಂಗಡಿ ಸಮೀಪದಲ್ಲಿರುವ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ, ಮನೆಗೆ ತೆರಳಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಎಂದು ಆರೋಪಿಸಲಾಗಿತ್ತು. 2022 ಅ.10ರಂದು ಮತ್ತೆ ಫೇಸ್‌ಬುಕ್ ಸಂದೇಶ ಹಾಕಿದ್ದ ಆರೋಪಿ ಬಾಲಕಿ ಬಳಿ ‘ನನ್ನನ್ನು ಕ್ಷಮಿಸು, ಇನ್ನು ನಿನಗೆ ತೊಂದರೆ ಕೊಡಲ್ಲ, ನನ್ನಷ್ಟಕ್ಕೆ ನಾನಿರುವೆ’ ಎಂದು ಹೇಳಿದ್ದ. ಇದರಿಂದ ನೊಂದ ಬಾಲಕಿ ಡೀಸೆಲ್ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಪ್ರಕರಣದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ 14 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿತ್ತು. 33 ದಾಖಲೆಗಳನ್ನು ಗುರುತಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಫೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಮಾನು ಕೆ.ಎಸ್. ಅವರು ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಕಲಂ-354 ಮತ್ತು ಕಲಂ 8 ಪೊಕ್ಸೋ ಕಾಯ್ದೆಯಂತೆ 3 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67ರಂತೆ 1 ವರ್ಷ ಸಾದಾ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಇನ್‌ಸ್ಪೆಕ್ಟರ್ ಶಿವಕುಮಾರ್ ಬಿ. ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ. ಬದರಿನಾಥ ನಾಯರಿ ವಾದ ಮಂಡಿಸಿದ್ದಾರೆ. ಅಲ್ಲದೇ ಬಾಲಕಿಗೆ 50 ಸಾವಿರ ರೂ.ವನ್ನು ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ದಂಡ ಪ್ರಕ್ರಿಯೆ ಸಂಹಿತೆ ಕಲಂ 357(ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1,50,000 ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡುವಂತೆ ಆದೇಶಿಸಲಾಗಿದೆ.

    Post Views: 243

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.