Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಹಿಳೆಯ ಕೊಲೆಗೈದ ದಂಪತಿಗೆ ಜೀವಾವಧಿ ಶಿಕ್ಷೆ, ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು: ಮಹಿಳೆಯ ಕೊಲೆಗೈದ ದಂಪತಿಗೆ ಜೀವಾವಧಿ ಶಿಕ್ಷೆ, ದಂಡ

    September 25, 2024
    Share

    ಮಂಗಳೂರು: ನಗರದ ಅತ್ತಾವರದ ಶ್ರೀಮತಿ ಶೆಟ್ಟಿ ಎಂಬವರನ್ನು ಕೊಲೆಗೈದು ಮೃತದೇಹವನ್ನು 29ತುಂಡುಗಳನ್ನಾಗಿ ಮಾಡಿ ಬೇರೆಬೇರೆ ಕಡೆಗಳಲ್ಲಿ ಎಸೆದ ಪ್ರಕರಣದಲ್ಲಿ ದಂಪತಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು ಮೂರನೇ ಅಪರಾಧಿಗೆ ಆರುವರೆ ತಿಂಗಳು ಸಜೆಯನ್ನು ವಿಧಿಸಿದೆ. ಸೂಟರ್‌ಪೇಟೆಯ ಜೋನಸ್ ಸ್ಯಾಮ್ಸನ್ (35), ವಿಕ್ಟೋರಿಯಾ ಮಥಾಯಿಸ್ (47) ಹಾಗೂ ಮರಕಡ ತಾರಿಪಾಡಿ ಗುಡ್ಡೆಯ ರಾಜು (34) ವಿರುದ್ಧ ಆರೋಪ ಮೊದಲೇ ಸಾಬೀತಾಗಿತ್ತು. ಮಂಗಳವಾರ ತೀರ್ಪು ಪ್ರಕಟಿಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್.ರವರು, ಜೋನಸ್ ಸ್ಯಾಮ್ಸನ್ ಹಾಗೂ ವಿಕ್ಟೋರಿಯಾ ಮಥಾಯಿಸ್‌ಗೆ ಐಪಿಸಿ ಸೆಕ್ಷನ್‌ 302 (ಕೊಲೆ) ಹಾಗೂ ಸೆಕ್ಷನ್‌ 34 (ಸಮಾನ ಉದ್ದೇಶದ ಕೊಲೆ) ಅಡಿ ಜೀವಾವಧಿ ಶಿಕ್ಷೆ ಹಾಗೂ ತಲಾ 25 ಸಾವಿರ ದಂಡ ವಿಧಿಸಿದ್ದಾರೆ. ಅಪರಾಧಿಗಳು ದಂಡ ತೆರಲು ತಪ್ಪಿದಲ್ಲಿ ಮತ್ತೆ 1 ವರ್ಷ ಸಾದಾ ಸಜೆ ಅನುಭವಿಸಬೇಕು. ಐಪಿಸಿ ಸೆಕ್ಷನ್‌ 201 (ಸುಳ್ಳು ಸಾಕ್ಷ್ಯ ಹಾಗೂ ಸಾಕ್ಷ್ಯನಾಶ) ಮತ್ತು ಸೆಕ್ಷನ್‌ 34ರ ಅಡಿ 7ವರ್ಷಗಳ ಸಾದಾ ಸಜೆ ಮತ್ತು ತಲಾ 5 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ವಿಫಲವಾದಲ್ಲಿ 3 ತಿಂಗಳ ಸಾದಾ ಸಜೆ. ಐಪಿಸಿ ಸೆಕ್ಷನ್‌ 392 (ಸುಲಿಗೆ) ಮತ್ತು 34ರ ಅಡಿಯಲ್ಲಿ 5 ವರ್ಷಗಳ ಸಾದಾ ಶಿಕ್ಷೆ ಹಾಗೂ ತಲಾ 5 ಸಾವಿರ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲರಾದರೆ 6 ತಿಂಗಳ ಸಾದಾ ಸಜೆ ಅನುಭವಿಸಬೇಕು ಎಂದು ಆದೇಶ ಮಾಡಿದ್ದಾರೆ. ರಾಜುಗೆ ಐಪಿಸಿ ಸೆಕ್ಷನ್‌ 414ರ ಅಡಿ (ಕದ್ದ ಸ್ವತ್ತು ಬಚ್ಚಿಡಲು ನೆರವು) ಆರೂವರೆ ತಿಂಗಳು ಸಾದಾ ಸಜೆ ಮತ್ತು 5ಸಾವಿರ ದಂಡ ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ ಶ್ರೀಮತಿ ಶೆಟ್ಟಿ ತಾಯಿಗೆ 75 ಸಾವಿರ ಪರಿಹಾರ ನೀಡಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಪರಿಹಾರ ನೀಡಬೇಕೆಂದು ತೀರ್ಪಿನಲ್ಲಿ ನಿರ್ದೇಶಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಲಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು. ಅಪರಾಧಿಗಳಿಗೆ ಹೆಚ್ಚುವರಿ ಶಿಕ್ಷೆಗೆ ಒತ್ತಾಯಿಸಿ ಸರ್ಕಾರದ ಮೂಲಕ ಹೈಕೋರ್ಟ್ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ವಕೀಲರು ತಿಳಿಸಿದ್ದಾರೆ.

    Post Views: 484

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.