Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಸ್ಟಮ್ಸ್ ಅಧಿಕಾರಿ ಹೆಸರಲ್ಲಿ ಬೆದರಿಸಿ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಕಸ್ಟಮ್ಸ್ ಅಧಿಕಾರಿ ಹೆಸರಲ್ಲಿ ಬೆದರಿಸಿ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು

    October 1, 2024
    Share

    ಮಂಗಳೂರು: ಕೊರಿಯರ್ ಮಾಡಿದ ಪಾರ್ಸೆಲ್ ನಲ್ಲಿ ಡ್ರಗ್ಸ್ ಇತ್ತೆಂದು ಆರೋಪಿಸಿ ವ್ಯಕ್ತಿಯನ್ನು ಬೆದರಿಸಿ 39.30 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.23ರಂದು ತನಗೆ ಫೋನ್ ಕರೆ ಮಾಡಿದ ಮಹಿಳೆ ತನ್ನನ್ನು ಮುಂಬೈನ ಡಿಎಚ್‌ಎಲ್ ಕೊರಿಯರ್ ಕಚೇರಿಯ ಶ್ರೇಯಾ ಶರ್ಮಾ ಎಂಬುದಾಗಿ ಪರಿಚಯಿಸಿಕೊಂಡು “ನಿಮ್ಮ ಹೆಸರಿನಲ್ಲಿ ಚೀನಾಕ್ಕೆ ಕಳುಹಿಸಿದ ಪಾರ್ಸೆಲ್ ಬಂದಿದೆ ಅದು ಚೀನಾಕ್ಕೆ ರವಾನೆಯಾಗದೆ ನಮ್ಮ ಕಚೇರಿಯಲ್ಲಿಯೇ ಉಳಿದಿದೆ. ಅದರಲ್ಲಿ 5 ಪಾಸ್‌ಪೋರ್ಟ್, 1 ಲ್ಯಾಪ್ / ಟಾಪ್, 400 ಗ್ರಾಂ ಎಂಡಿಎಂಎ ಡ್ರಗ್ಸ್ ಬ್ಯಾಂಕ್ ದಾಖಲೆಗಳು, ಮೂರೂವರೆ ಕೆಜಿ ಬಟ್ಟೆ ಇದೆ’ ಎಂದಿದ್ದಳು. ತಾನು ಯಾವ ಪಾರ್ಸೆಲ್ ಕೂಡಾ ಕಳುಹಿಸಿಲ್ಲ ಎಂದಿದ್ದರೂ ಆಕೆ ‘ನಿಷೇಧಿತ ಡ್ರಗ್ಸ್ ಇರುವುದರಿಂದ ನಿಮ್ಮನ್ನು ಸಂಜೆ 6 ಗಂಟೆಯ ಒಳಗೆ ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡುತ್ತಾರೆ. ಸೆ.24ರ ಬೆಳಗ್ಗೆ 9ಕ್ಕೆ ವಿಚಾರಣೆಗೆ ಒಳಪಡಿಸಲಾಗುವುದು’ ಎಂದಳು. ಸೆ.24ರಂದು ಬೆಳಗ್ಗೆ 9 ಗಂಟೆಗೆ ಕರೆ ಮಾಡಿದ ಆಕೆ ವೀಡಿಯೋ ಕಾಲ್‌ನಲ್ಲಿ ವಿಚಾರಣೆಗೆ ಒಳಪಡಿಸುವಂತೆ ಮಾಡಿದ್ದು ಬಂಧನ ಮಾಡದೆ ನಿರಪರಾಧಿ ಎಂದು ಸಾಬೀತುಪಡಿಸಬೇಕಾದರೆ ಕೂಡಲೇ ಹಣವನ್ನು ವರ್ಗಾಯಿಸಬೇಕು ಎಂದು ಖಾತೆ ಸಂಖ್ಯೆಯನ್ನು ತಿಳಿಸಿದಳು. ಹೆದರಿದ ತಾನು 37 ಲಕ್ಷ ರೂ.ಗಳನ್ನು ಆಕೆ ಹೇಳಿದ ಖಾತೆಗೆ ವರ್ಗಾಯಿಸಿದೆ. ಸೆ.26ರಂದು ಸೊತ್ತುಗಳ ವಿಚಾರಣೆಯನ್ನು ಆಡಿಟರ್ ಮಾಡುವುದಾಗಿ ನಂಬಿಸಿ ಮತ್ತೆ 2.30 ಲಕ್ಷ ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾಳೆ. ವಿಚಾರಣೆ ಮುಗಿದ ಬಳಿಕ ಸೆ.28ರಂದು ಹಣವನ್ನು ಬಡ್ಡಿ ಸಮೇತ ವಾಪಸ್ ನೀಡುವುದಾಗಿಯೂ ಹೇಳಿದ್ದಾಳೆ. ಆದರೆ ಆ ಬಳಿಕ ಕರೆ ಮಾಡಿಲ್ಲ. ಬಳಿಕ ಆಕೆಗೆ ಎಷ್ಟೇ ಕರೆ, ಮೆಸೇಜ್ ಮಾಡಿದರೂ ಪ್ರತಿಕ್ರಿಯೆ ಬರಲಿಲ್ಲ ಎಂದು ವಂಚನೆಗೊಳಗಾದ ವ್ಯಕ್ತಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Post Views: 155

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.