Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ಹೈಕೋರ್ಟ್ ಪೀಠ- ಹೋರಾಟಕ್ಕೆ ಸಿದ್ಧತೆ
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಹೈಕೋರ್ಟ್ ಪೀಠ- ಹೋರಾಟಕ್ಕೆ ಸಿದ್ಧತೆ

    October 3, 2024
    Share

    ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬಲಗೊಳ್ಳುತ್ತಿದ್ದು ಬೇಡಿಕೆ ಮತ್ತೊಂದು ಹೋರಾಟಕ್ಕೆ ವೇದಿಕೆ ಸಜ್ಜಾಗುತ್ತಿದೆ. ಹೈಕೋಟ್ ಪೀಠ ಮಂಗಳೂರಿನಲ್ಲಿ ಸ್ಥಾಪನೆಯಾದರೆ ದ.ಕ. ಜಿಲ್ಲೆ ಮಾತ್ರವಲ್ಲದೆ ಉಡುಪಿ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರಕನ್ನಡ ದವರಿಗೂ ಅನುಕೂಲವಾಗಲಿದೆ. ಅಕ್ಕಪಕ್ಕದ ಜಿಲ್ಲೆಯವರು ಮಂಗಳೂರಿಗೆ ಬರುವುದಕ್ಕೆ ಪೂರಕವಾಗಿ ಎಲ್ಲ ಅಗತ್ಯ ಸೌಕರ್ಯಗಳು ಇಲ್ಲಿವೆ ಎನ್ನುತ್ತಾರೆ ಮಂಗಳೂರಿನ ನ್ಯಾಯವಾದಿಗಳು. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆ ಬಹುಕಾಲದ್ದು. 2008ರಲ್ಲಿಯೂ ಹೋರಾಟ ನಡೆದಿತ್ತು. ಅನಂತರವೂ ಹಲವಾರು ಬಾರಿ ಪ್ರಯತ್ನಗಳನ್ನು ನಡೆಸಲಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳ ಒಟ್ಟು ಪ್ರಕರಣಗಳು ಹೈಕೋರ್ಟ್‌ನ ಒಟ್ಟು ಪ್ರಕರಣಗಳ ಶೇ. 30ರಷ್ಟಿವೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸ್ಥಳಾವಕಾಶದ ಕೊರತೆಯೂ ಇಲ್ಲ. ಈಗ ಕೊಡಿಯಾಲಬೈಲ್ ನಲ್ಲಿರುವ ಜಿಲ್ಲಾ ಕಾರಾಗೃಹ ಮುಡಿಪುವಿಗೆ ಸ್ಥಳಾಂತರವಾಗಲಿದೆ. ಹಾಗಾಗಿ ಕೊಡಿಯಾಲಬೈಲಿನ 6 ಎಕರೆ ಸ್ಥಳದಲ್ಲಿ ಪೀಠ ಸ್ಥಾಪನೆ ಮಾಡಬಹುದು ಎನ್ನುತ್ತಾರೆ ಮಂಗಳೂರು ವಕೀಲರ ಸಂಘದ ಹಾಲಿ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಮತ್ತು ಮಾಜಿ ಅಧ್ಯಕ್ಷ ಪೃಥ್ವಿರಾಜ್ ರೈ ರವರು.

    Post Views: 200

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.