Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ- ವ್ಯಕ್ತಿ ಪೊಲೀಸ್‌ ವಶ..!
    ಇತ್ತೀಚಿನ ಸುದ್ದಿ

    ಪುತ್ತೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ- ವ್ಯಕ್ತಿ ಪೊಲೀಸ್‌ ವಶ..!

    October 9, 2024
    Share

    ಪುತ್ತೂರು: ಮಾದಕ ವಸ್ತು ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸಿದ್ದು ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು, ಪುತ್ತೂರು ಕಸಬಾ ಗ್ರಾಮದ ಹಳೆ ನಿರಾಳ ಬಾರ್ನದಲ್ಲಿ ನಡೆದಿದೆ. ಬಂಧಿತನನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮ ದೂಮಡ್ಕ ನಿವಾಸಿ ಮೆಹಬೂಬ್ (44) ಎಂದು ಗುರುತಿಸಲಾಗಿದೆ. ಅ. 8 ರಂದು ಮದ್ಯಾಹ್ನದ ವೇಳೆ ಪುತ್ತೂರು ಕಸಬಾ ಗ್ರಾಮದ ಹಳೆ ನಿರಾಳ ಬಾರ್‌ನ ಹಿಂದುಗಡೆ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಪುತ್ತೂರು ನಗರ ಠಾಣೆ ಉಪ ನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿ.ವಿ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ತೆರಳಿದರು. ಈ ವೇಳೆ ವ್ಯಕ್ತಿ ಓಡಿ ಹೋಗಲು ಪ್ರಯತ್ನಿಸಿದ್ದು ಆತನನ್ನು ಸಿಬ್ಬಂದಿಗಳ ಸಹಾಯದಿಂದ ವಶಕ್ಕೆ ಪಡೆದು ವಿಚಾರಿಸಿದಾಗ ಆತನ ಹೆಸರು ವಿಳಾಸ ಮೆಹಬೂಬ್ (44) ವರ್ಷ, ದೂಮಡ್ಕ ಅಂಚೆ ಇರ್ದೆ ಗ್ರಾಮ ಪುತ್ತೂರು ತಾಲೂಕು ಎಂಬುದಾಗಿ ತಿಳಿಸಿದ. ಆತ ಯಾವುದೋ ಸೇವಿಸಿದವನಂತೆ ಕಂಡುಬಂದ ಹಿನ್ನೆಲೆಯಲ್ಲಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು, ಆತ ಮಾದಕವಸ್ತುವನ್ನು ಸೇವಿಸಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ: 89/2024 27 (b) NDPS Act ಯಂತೆ ಪ್ರಕರಣ ದಾಖಲಾಗಿರುತ್ತದೆ.

    Post Views: 188

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.