Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವ್ಯಕ್ತಿಯಿಂದ ATM ಕಾರ್ಡ್ ಕಸಿದುಕೊಂಡು ಹಣ ಡ್ರಾ ಮಾಡಿಕೊಂಡ ಅಪರಿಚಿತರು..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವ್ಯಕ್ತಿಯಿಂದ ATM ಕಾರ್ಡ್ ಕಸಿದುಕೊಂಡು ಹಣ ಡ್ರಾ ಮಾಡಿಕೊಂಡ ಅಪರಿಚಿತರು..!

    October 10, 2024
    Share

    ಬೆಳ್ತಂಗಡಿ: ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಹಣ ಡ್ರಾ ಮಾಡಿಕೊಂಡ ಘಟನೆ ಗೇರುಕಟ್ಟೆ ಎ.ಟಿ.ಎಂ ಕೇಂದ್ರದಲ್ಲಿ ನಡೆದಿದೆ. ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71) ಎಂಬವರು ಗೇರುಕಟ್ಟೆ ಕೆನರಾ ಬ್ಯಾಂಕಿನ ಎ.ಟಿ.ಎಂ ನಲ್ಲಿ ಹಣ ತೆಗೆಯಲೆಂದು ಹೋಗಿದ್ದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಎ.ಟಿ.ಎಂ ಒಳಗೆ ಬಂದು ಅಬೂಬಕ್ಕರ್ ಅವರಿಗೆ ಸಹಾಯ ಮಾಡಲು ಮುಂದಾಗುತ್ತಾರೆ. ಅಬೂಬಕ್ಕರ್ ಅವರು ಸಹಾಯ ಅಗತ್ಯವಿಲ್ಲ ಎಂದು ಹೇಳಿದರೂ ಅಪರಿಚಿತರು ಅಲ್ಲಿ ಅವರೊಂದಿಗೆ ಇದ್ದರು ಎನ್ನಲಾಗಿದೆ. ಇದಾದ ಎರಡು ದಿನಗಳ ಬಳಿಕ ಅಬೂಬಕ್ಕರ್ ಮತ್ತೆ ಎ.ಟಿ.ಎಂ ಗೆ ಹೋದಾಗ ಎಟಿಎಂ ಕಾರ್ಡ್ ವರ್ಕ್ ಆಗುತ್ತಿರಲಿಲ್ಲ. ಬ್ಯಾಂಕಿನಲ್ಲಿ ವಿಚಾರಿಸಿದಾಗ ಖಾತೆಯಲ್ಲಿದ್ದ 49,200 ರೂ. ಎ.ಟಿ.ಎಂ ಕಾರ್ಡ್ ಬಳಸಿ ತೆಗೆದಿರುವುದು ಕಂಡು ಬಂದಿದೆ. ಅಪರಿಚಿತ ವ್ಯಕ್ತಿಗಳು ಎಟಿಎಂ ಕೇಂದ್ರದಲ್ಲಿ ಅಬೂಬಕ್ಕರ್ ಅವರಿಂದ ಎಟಿಎಂ ಕಾರ್ಡ್ ಅಪಹರಿಸಿ ಯಾವುದೋ ಹಳೆಯ ಕಾರ್ಡನ್ನು ಅವರಿಗೆ ನೀಡಿದ್ದರು. ಬಳಿಕ ಕಾರ್ಡನ್ನು ಉಪಯೋಗಿಸಿ ಹಣ ಕಬಳಿಸಿದ್ದರು. ಇದೀಗ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ

    Post Views: 225

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.