Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸ್ ವಶಕ್ಕೆ

    October 11, 2024
    Share

    ಮಂಗಳೂರು : ನಗರದ ಹೊರವಲಯದ ತಲಪಾಡಿ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ಕಿರಣ್ ಡಿಸೋಜ (25) ಬಂಧಿತ ಆರೋಪಿ. ಕಿರಣ್ ಡಿಸೋಜ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿಯ ಅತಿಥಿ ಬಾರ್ ಬಳಿ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ. ಅಲ್ಲಿಗೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿ, 10 ಗ್ರಾಂ ತೂಕದ 30,000 ರೂ. ಮೌಲ್ಯದ ಎಂಡಿಎಂಎ, ಸ್ಕೂಟರ್ ಮತ್ತು ಮೊಬೈಲ್ ಫೋನ್‌ಅನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 65,500 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

    Post Views: 234

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.