Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲೈಸೆನ್ಸ್, FC ಇಲ್ಲದಿದ್ದರೂ ಸಂತ್ರಸ್ತರಿಗೆ ವಿಮಾ ಪರಿಹಾರ ನೀಡಬೇಕು : ಹೈಕೋರ್ಟ್
    ಇತ್ತೀಚಿನ ಸುದ್ದಿ

    ಲೈಸೆನ್ಸ್, FC ಇಲ್ಲದಿದ್ದರೂ ಸಂತ್ರಸ್ತರಿಗೆ ವಿಮಾ ಪರಿಹಾರ ನೀಡಬೇಕು : ಹೈಕೋರ್ಟ್

    October 12, 2024
    Share

    ಬೆಂಗಳೂರು : ಅಪಘಾತಕ್ಕೆ ಕಾರಣವಾಗುವ ವಾಹನವು ಅಪಘಾತದ ಸಮಯದಲ್ಲಿ ಮಾನ್ಯವಾದ ಪರವಾನಗಿ ಮತ್ತು ಫಿಟ್‌ನೆಸ್ ಪ್ರಮಾಣಪತ್ರವನ್ನು ಹೊಂದಿರದಿದ್ದರೂ, ವಿಮಾ ಕಂಪನಿಯು ಹಕ್ಕುದಾರರಿಗೆ ಪಾವತಿಸಬೇಕಾದ ಪರಿಹಾರದ ಮೊತ್ತವನ್ನು ಪಾವತಿಸಲು ಮತ್ತು ಅದನ್ನು ವಾಹನದಿಂದ ವಸೂಲು ಮಾಡಲು ಹೊಣೆಗಾರನಾಗಿರುತ್ತಾನೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

    ಸಂತ್ರಸ್ತರಿಗೆ ಪರಿಹಾರ ಪಾವತಿಸಲು ತನಗೆ ಸೂಚಿಸಿದ ಅಧೀನ ನ್ಯಾಯಾಲಯ ಆದೇಶ ರದ್ದು ಕೋರಿ ಶ್ರೀರಾಮ ಜನರಲ್ ವಿಮಾ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ. ಜಿ. ಶಿವಶಂಕರೇಗೌಡ ಅವರ ನ್ಯಾಯಪೀಠ ಈ ಆದೇಶ ನೀಡಿದೆ

    ಅಪಘಾತ ಉಂಟು ಮಾಡಿರುವ ಸರಕು ಸಾಗಣೆ ವಾಹನಕ್ಕೆ ರಹದಾರಿ ಪರವಾನಿಗೆ ಮತ್ತು ಸದೃಢ ಪ್ರಮಾಣ ಪತ್ರವೇ ಚಾಲ್ತಿಯಲ್ಲಿ ಇರಲಿಲ್ಲ. ಈ ಪ್ರಮಾಣ ಪತ್ರ ನವೀಕರಣ ಮಾಡದಿರುವುದು ವಾಹನ ಮಾಲೀಕನ ತಪ್ಪು. ಇದರಿಂದ ಅವರೇ ಘಟನೆಯ ಸಂತ್ರಸ್ತರಿಗೆ ಪರಿಹಾರ ಪಾವತಿಸಬೇಕಿದ್ದು, ಸರಕು ಸಾಗಣೆ ವಾಹನಕ್ಕೆ ವಿಮಾ ಪಾಲಿಸಿ ವಿತರಿಸಿದ್ದ ಶ್ರೀರಾಮ ಜನರಲ್ ವಿಮಾ ಕಂಪನಿಯು ಕೋರಿತ್ತು.

    ವಿಚಾರಣೆ ನಡೆಸಿದ ಹೈಕೋರ್ಟ್, ಸದೃಢ ಪ್ರಮಾಣ ಪತ್ರ ಮತ್ತು ನೋಂದಣಿ, ರಹದಾರಿ ಪರವಾನಗಿ ನವೀಕರಣ ಮಾಡದೆ ವಾಹನವನ್ನು ಚಲಾಯಿಸಿದ್ದು ಮಾಲೀಕನ ತಪ್ಪು. ಆದರೆ, ಈ ಒಂದು ಕಾರಣಕ್ಕೆ ವಿಮಾ ಕಂಪನಿ ತನ್ನ ಹೊಣೆಗಾರಿಕೆಯಿಂದ ಬಚಾವಾಗಲು ಸಾಧ್ಯವಿಲ್ಲ. ಹೀಗಾಗಿ, ವಿಮಾ ಕಂಪೆನಿಯು ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯ ಕುಟುಂಬದವರಿಗೆ ಪರಿಹಾರ ಪಾವತಿಸಬೇಕು.

    ಮುಂದಿನ ಎಂಟು ವಾರಗಳಲ್ಲಿ ಪರಿಹಾರ ಮೊತ್ತವನ್ನು ಸಂತ್ರಸ್ತರ ಖಾತೆಗೆ ಪಾವತಿ ಮಾಡಬೇಕು. ನಂತರ ಆ ಮೊತ್ತವನ್ನು ವಾಹನ ಮಾಲೀಕರಿಂದ ವಸೂಲಿ ಮಾಡಿಕೊಳ್ಳಬೇಕು ಆದೇಶಿಸಿದೆ. ಅಧೀನ ನ್ಯಾಯಾಲಯವು ನಿಗದಿಪಡಿಸಿರುವ ಪರಿಹಾರ ಮೊತ್ತವನ್ನು 18 ಲಕ್ಷ ರು. ಹೆಚ್ಚಿಸಿ ಹೈಕೋರ್ಟ್ ಆದೇಶಿಸಿದೆ.

    ಪ್ರಕರಣದ ವಿವರ : ಸೈಕಲ್ ಸವಾರ ನಂದೀಶಪ್ಪ ಎಂಬುವವರು 2013ರ ಜೂ. 17ರಂದು ಹೊಸ ಕೋಟೆ ಚಿಕ್ಕತಿರುಪತಿ ಮಾರ್ಗದಲ್ಲಿ ಕೆಲಸದಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದಿತ್ತು. ಇದರಿಂದ ತಲೆಗೆ ತೀವ್ರ ಗಾಯದಿಂದಾಗಿ ಸಾವಿಗೀಡಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಅಧೀನ ಕೋರ್ಟ್‌ ಮೃತನ ಕುಟುಂಬದವರಿಗೆ 13.88 ಲಕ್ಷ ರೂ. ಪರಿಹಾರ ನೀಡಲು ಸರಕು ಸಾಗಣೆ ವಾಹನಕ್ಕೆ ವಿಮಾ ಪಾಲಿಸಿ ವಿತರಿಸಿದ್ದ ಶ್ರೀರಾಮ ಜನರಲ್ ವಿಮಾ ಕಂಪನಿಗೆ ಸೂಚಿಸಿತ್ತು.

    Post Views: 244

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.