Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿಧಾನ ಪರಿಷತ್ ಚುನಾವಣೆ- 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ
    ಇತ್ತೀಚಿನ ಸುದ್ದಿ

    ಮಂಗಳೂರು: ವಿಧಾನ ಪರಿಷತ್ ಚುನಾವಣೆ- 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ

    October 20, 2024
    Share

    ಮಂಗಳೂರು : ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ. ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರುಗಳನ್ನು ನೇಮಕ ಮಾಡಲಾಗಿದೆ.

    ಈಗಾಗಲೇ ಆಯಾ ಗ್ರಾಮ ಪಂಚಾಯತ್‍ಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಸಿಸಿಟಿವಿಗಳನ್ನು ಚುನಾವಣಾ ಪ್ರಕ್ರಿಯೆಗೆ ಬಳಸಲಾಗುತ್ತಿದೆ ಎಂದು ಅವರು ತಿಳಿಸಿದರು. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,552 ಹಾಗೂ ಉಡುಪಿ ಜಿಲ್ಲೆಯಲ್ಲಿ 2,480 ಮತದಾರರಿದ್ದಾರೆ ಎಂದು ಅವರು ತಿಳಿಸಿದರು.ಮತದಾರರು ಮತಗಟ್ಟೆಯಲ್ಲಿ ನೀಡುವ ನೇರಳೆ ಪೆನ್ನಿನಿಂದ ಮತಪತ್ರದಲ್ಲಿ ಪ್ರಾಶಸ್ತ್ಯ ಅನುಸಾರ ಮತ ಚಲಾಯಿಸಬೇಕು ಮೊದಲನೇ ಪ್ರಾಶಸ್ತ್ಯದ ಮತವನ್ನು ಯಾವ ಅಭ್ಯರ್ಥಿಗೆ ಚಲಾಯಿಸುತ್ತಿದ್ದಾರೆ ಎಂಬುದನ್ನು ಕ್ರಮ ಸಂಖ್ಯೆ “1” ಎಂದು ನಮೂದಿಸುವ ಮೂಲಕ ಮತ ಚಲಾಯಿಸಬೇಕು ಇಂಗ್ಲಿಷ್‌ ಕನ್ನಡ ಅಥವಾ ರೋಮನ್ ಅಂಕಿಯಲ್ಲಿ “1” ನಮೂದಿಸಬೇಕು. ಪ್ರಾಶಸ್ತ್ರವನ್ನು ಅಂಕಿಗಳ ಮೂಲಕ ಮಾತ್ರ ಎಂದರೆ 1, 2, 3 ಇತ್ಯಾದಿ ಕ್ರಮದಲ್ಲಿ ಮಾತ್ರ ಗುರುತು ಹಾಕಬೇಕು ಇದರ ಬದಲಾಗಿ ಒಂದು ಎರಡು, ಮೂರು, ಇತ್ಯಾದಿ ಅಕ್ಷರಗಳ ರೂಪದಲ್ಲಿ ಬರೆಯಬಾರದು ಎಂದು ಸೂಚನೆ ನೀಡಲಾಗಿದೆ. ಮತ ಚಲಾಯಿಸುವ ಉದ್ದೇಶಕ್ಕಾಗಿ ಮತಗಟ್ಟೆ ಅಧ್ಯಕ್ಷಾಧಿಕಾರಿಯವರು ರವರು ಮತಪತ್ರದೊಡನೆ ನೀಡುವ ನೇರಳೆ ಬಣ್ಣದ ಪೆನ್ನನ್ನು ಮಾತ್ರ ಬಳಸಿ ಮತಚಲಾಯಿಸಲು ಅವಕಾಶವಿರುತ್ತದೆ. ಬೇರೆ ಇತರೇ ಯಾವುದೇ ಪೆನ್ನು ಅಥವಾ ಗುರುತು ಮಾಡುವ ಸಾಧನವನ್ನು ಬಳಸಿ ಮತ ಚಲಾಯಿಸಿದರೆ ಅಂತಃ ಮತಪತ್ರವನ್ನು ಅಸಿಂಧು ಪರಿಗಣಿಸಲಾಗುವುದು.ಈಗಾಗಲೇ ಮತ ಚಲಾಯಿಸುವ ವಿಧಾನದ ಬಗ್ಗೆ ಎಲ್ಲಾ ಮತದಾರರಿಗೆ ಮಾಹಿತಿ ನೀಡಲಾಗಿದೆ ಮೊಬೈಲ್ ಫೆÇೀನು ತೆಗೆದುಕೊಂಡು ಹೋಗಲು ಅವಕಾಶ ಇಲ್ಲ ಎಂದು ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 ಗ್ರಾಮ ಪಂಚಾಯತ್‍ಗಳ 3,263 ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ 65, ಎರಡು ನಗರ ಸಭೆಗಳಲ್ಲಿ 64, 3 ಪುರಸಭೆಗಳಲ್ಲಿ 74 ಹಾಗೂ 5 ನಗರ ಪಂಚಾಯತ್ ನಲ್ಲಿ 86 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.ಉಡುಪಿ ಜಿಲ್ಲೆಯಲ್ಲಿ 153 ಗ್ರಾಮ ಪಂಚಾಯತ್ ಗಳಲ್ಲಿ 2,355 ಸದಸ್ಯರು, ಉಡುಪಿ ನಗರ ಸಭೆಯಲ್ಲಿ 36, 3 ಪುರಸಭೆಯಲ್ಲಿ 72 ಹಾಗೂ ಒಂದು ನಗರ ಪಂಚಾಯತ್ ನಲ್ಲಿ 17 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ.ಮತ ಎಣಿಕೆ ಮಂಗಳೂರು ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 24ರಂದು ನಡೆಯಲಿದೆ.ಎಲ್ಲಾ ಮತಗಟ್ಟೆಗಳಿಗೆ ಭದ್ರತೆಯ ಬಗ್ಗೆ ಸಂಬಂದಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ  ಅಧೀಕ್ಷಕರ ವ್ಯಾಪ್ತಿ ಮತ್ತು  ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಸೇರಿಕೊಂಡು ಒಟ್ಟು 540  ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳನ್ನು ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 328  ಪೊಲೀಸ್ ಅಧಿಕಾರಿ / ಸಿಬ್ಬಂದಿ ಕೂಡ ನಿಯೋಜಿಸಲಾಗಿರುತ್ತದೆ.
    ಮತಗಟ್ಟೆ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೆ ವ್ಯಾಪಾರ ವಹಿವಾಟು,ಜನಸಂದಣಿ ಗುಂಪು ಗುಂಪು ಆಗಿ ಜನಸೇರದಂತೆ ಸೂಚಿಸಲಾಗಿದೆ ಈ ಬಗ್ಗೆ ಮತಗಟ್ಟೆಗಳು ಇರುವ ಪ್ರದೇಶ ವ್ಯಾಪ್ತಿಗೆ ಸಂಬಂಧಿಸಿದಂತೆ ಕಲಂ 163 ರಂತೆ ನಿಷೇಧಾಜ್ಞೆಯನ್ನು ಕೂಡ ಹೊರಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 186

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.