ದೆಹಲಿ: ‘ಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆ’ ಎಂದು ಭಾರತದ ನೂತನ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು ಹೇಳಿದ್ದಾರೆ.
ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಭಾಷಣ ಮಾಡಿದ ದ್ರೌಪದಿ ಮುರ್ಮು, ಭಾರತದ ವಿಕಾಸ ಯಾತ್ರೆಯ ವೇಗ ಹೆಚ್ಚಿಸಬೇಕು. ಸ್ವಾತಂತ್ರ್ಯ ಅಮೃತೋತ್ಸವ ಹೊತ್ತಲ್ಲಿ ಇದು ಹೊಸ ಚರಿತ್ರೆ. ಬಡವರ ಕನಸು ನನಸು ಮಾಡಲು ಬದ್ಧವಾಗಿದ್ದೇನೆ ಎಂದಿದ್ದಾರೆ. ಇನ್ನು ಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆಯಾಗಿದ್ದು, ಅದರೊಂದಿಗೆ ಬಡವರ ಕನಸು ನನಸು ಮಾಡಲು ಬದ್ಧವಾಗಿದ್ದೇನೆ ಎಂದರು.
ನಾನು ರಾಷ್ಟ್ರಪತಿಯಾಗಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ. ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ. ನ್ನ ನಾಮನಿರ್ದೇಶನವು ಭಾರತದಲ್ಲಿನ ಬಡವರ ಕನಸುಗಳನ್ನು ನನಸಾಗಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.