Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮನೆ ಯಜಮಾನಿಗೆ ಐಟಿ ದಾಳಿ ಬೆದರಿಕೆ; ಕೆಲಸದಾಕೆಯಿಂದ 7.50 ಲಕ್ಷ ರೂ. ವಂಚನೆ
    Uncategorized

    ಮನೆ ಯಜಮಾನಿಗೆ ಐಟಿ ದಾಳಿ ಬೆದರಿಕೆ; ಕೆಲಸದಾಕೆಯಿಂದ 7.50 ಲಕ್ಷ ರೂ. ವಂಚನೆ

    November 2, 2024
    Share

    ಮಣಿಪಾಲ: ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಮನೆ ಯಜಮಾನಿಯ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರವನ್ನು ಕೆಲಸದಾಕೆ ತೆಗೆದುಕೊಂಡು ಹೋಗಿ ಮೋಸ ಮಾಡಿರುವ ಘಟನೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಶಿವಳ್ಳಿ ಗ್ರಾಮದ ನಿವಾಸಿ ಪೆರಂಪಳ್ಳಿ ರಸ್ತೆಯ ಜ್ಯೂಲಿಯಟ್ ಅವರು 4 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಅವರನ್ನು ಮನೆ ಕೆಲಸಕ್ಕೆ ಸೇರಿಸಿಕೊಂಡಿದ್ದರು. ಕೆಲಸದಾಕೆ ಸುನಿತಾ ಬಳಿ ಮನೆಯ ಯಜಮಾನಿ ತನ್ನ ಮತ್ತು ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿಕೊಂಡಿದ್ದರು. ಅದಕ್ಕೆ ಸುನೀತಾ ಗಂಡನಿಗೆ ವಿಚ್ಛೇದನ ನೀಡುವಂತೆ ಜೂಲಿಯೆಟ್ ಅವರಿಗೆ ಸಲಹೆ ನೀಡಿದ್ದರು. ಬೇಸರಗೊಂಡ ಜ್ಯೂಲಿಯೆಟ್ ಮನೆ ಬಿಟ್ಟು ಹೋಗಲು ತೀರ್ಮಾನಿಸಿದ್ದರು. ತಾಯಿಯನ್ನು ಮನೆಗೆ ಬರಲು ಹೇಳಿ ಅ. 10ರಂದು ತಾಯಿಗೆ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನ ಹಾಗೂ ಗಂಡನ ಮನೆಯ ಲಾಕರ್‌ನಲ್ಲಿಟ್ಟಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ರೂ. ಹಣವನ್ನು ನೀಡಿದ್ದರು.ಅ. 29ರಂದು ಬೆಳಗ್ಗೆ ಜ್ಯೂಲಿಯೆಟ್ ಮನೆಯಲ್ಲಿ ಇದ್ದ ವೇಳೆಯೇ ಸುನೀತಾ ಅವರು ಸ್ಟ್ಯಾನಿ ಅವರೊಂದಿಗೆ ಮನೆಗೆ ಬಂದು ಐ.ಟಿ. ಅಧಿಕಾರಿಗಳು ಬಂದಿದ್ದಾರೆ. ನಿಮ್ಮ ಮನೆಗೆ ರೈಡ್ ಮಾಡುತ್ತಾರೆ. ಲಾಕರ್‌ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆಯಬೇಕು ಎಂದು ಹೇಳಿ ಲಾಕರ್ ಕೀ ತೆಗೆದುಕೊಂಡು ಲಾಕರ್ ಓಪನ್ ಮಾಡಿ ಅದರಲ್ಲಿ ಇದ್ದ ಹಣದಲ್ಲಿ 1.50 ಲಕ್ಷ ರೂ.ಗಳನ್ನು ಜ್ಯೂಲಿಯೆಟ್ ಅವರ ಬ್ಯಾಗ್ ಗೆ ಹಾಕಿ ಉಳಿದ 7.50 ಲಕ್ಷ ರೂ. ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನೆಕ್ಲೆಸ್ ಅವಳ ಚೀಲದಲ್ಲಿ ಹಾಕಿಕೊಂಡು ನನ್ನಲ್ಲಿ ಇರಲಿ ಆನಂತರ ಕೊಡುತ್ತೇನೆ ಎಂದು ಹೇಳಿದ್ದರು. ಐ.ಟಿ.ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಸುನೀತಾ ಹಾಗೂ ಸ್ಟಾನಿ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರವನ್ನು ತೆಗೆದುಕೊಂಡು ಹೋಗಿ ವಂಚಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

    Post Views: 181

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.