Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಪುತ್ತೂರು – ನಾಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ ಪತ್ತೆ; ಸಾವಿನ ಬಗ್ಗೆ ಶಂಕೆ….!!
    ಕರಾವಳಿ ಸುದ್ದಿ

    ಪುತ್ತೂರು – ನಾಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ ಪತ್ತೆ; ಸಾವಿನ ಬಗ್ಗೆ ಶಂಕೆ….!!

    November 4, 2024
    Share

    ಪುತ್ತೂರು : ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ಪತ್ತೆಯಾಗಿದೆ.

    ಮೃತರನ್ನು ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಮನೆಯವರಿಗೆ ಒಂದು ತಿಂಗಳ ಬಳಿಕ ಗೊತ್ತಾಗಿದೆ.

    ಉರ್ವ ನಿವಾಸಿ ಸಂಜೀವ ಎಂಬವರು ಕನ್ಯಾನದಿಂದ ನಳಿನಿ ಎಂಬವರನ್ನು ಒಂದೂವರೆ ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ಮದುವೆ ಮಾಡಿಕೊಂಡಿದ್ದರು. ನಳಿನಿಯವರು ಆಗಾಗ ತನ್ನ ತಾಯಿ ಮನೆಗೆ ಹೋಗುತ್ತಿದ್ದರು ಎಂದು ಹೇಳಲಾಗಿದ್ದು, ಕಳೆದ ಒಂದು ತಿಂಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಸಂಜೀವರವರು ಅಕ್ಟೋಬರ್ 8ರಂದು ಸಂಪ್ಯ ಪೊಲೀಸ್‌ ಠಾಣೆಗೆ ತೆರಳಿ ತನ್ನ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ತಿಳಿಸಿದ್ದರು. ಪತ್ನಿಯ ಫೋಟೋ ತರುವಂತೆ ಠಾಣೆಯಲ್ಲಿ ತಿಳಿಸಿದ್ದರು. ಆದರೆ ಆ ಬಳಿಕ ಸಂಜೀವರವರು ಠಾಣೆಗೆ ತೆರಳಿ ದೂರು ನೀಡಿರಲಿಲ್ಲ ಎಂದು ಹೇಳಲಾಗಿದೆ.

    ನಳಿನಿಯವರು ತನ್ನ ತವರು ಮನೆಗೂ ಹೋಗದೇ ನಾಪತ್ತೆಯಾಗಿರುವ ವಿಷಯ ತಿಳಿದು ತವರು ಮನೆಯವರು ಉರ್ವದ ಸಂಜೀವರವರ ಮನೆಯ ಸುತ್ತಮುತ್ತ ನವೆಂಬರ್ 2ರಂದು ಸಂಜೆ ಬಂದು ಹುಡುಕಾಡಿದ್ದಾರೆ. ಈ ವೇಳೆ ಮನೆಯ ಎದುರಿನ ಗುಡ್ಡದ ತುದಿಯಲ್ಲಿ ಮರವೊಂದಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಹಗ್ಗ ಇದ್ದು ಹಗ್ಗದಲ್ಲಿ ತಲೆ ಕೂದಲು ಪತ್ತೆಯಾಗಿದೆ. ಹಗ್ಗದ ಕೆಳಗೆ ತಲೆ ಬುರುಡೆ ಹಾಗೂ ಕೈ ಮತ್ತು ಕಾಲಿನ ಎಲುಬುಗಳು ಪತ್ತೆಯಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 208

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.