Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಗಡುವು
    ಇತ್ತೀಚಿನ ಸುದ್ದಿ

    ಮಂಗಳೂರು: ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಗಡುವು

    November 6, 2024
    Share

    ಮಂಗಳೂರು: ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳನ್ನು ಹೊರತುಪಡಿಸಿ ಎಕ್ಸ್‌ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಿ ಕಾರ್ಯಾಚರಣೆ ನಡೆಸುವಂತೆ ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ವಿಧಿಸಲಾಗಿದೆ. ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಸ್ವಯಂಚಾಲಿತ ಬಾಗಿಲನ್ನು ಹೊಂದಿರುವ ಬಸ್‌ಗಳು ಕಡ್ಡಾಯವಾಗಿ ಇಂದಿನಿಂದಲೇ ಈ ಆದೇಶವನ್ನು ಪಾಲಿಸಬೇಕು. ಬಾಗಿಲನ್ನು ತೆಗೆದು ಹಾಕಿರುವ ಮತ್ತು ಬಾಗಿಲು ಇಲ್ಲದ ಬಸ್‌ಗಳಿಗೆ ತಕ್ಷಣ ಬಾಗಿಲು ಅಳವಡಿಸಬೇಕು. ಡಿ.10ರೊಳಗೆ ಕಡ್ಡಾಯವಾಗಿ ಈ ಆದೇಶವನ್ನು ಬಸ್ ಮಾಲಕರು ಅನುಷ್ಠಾನಗೊಳಿಸಬೇಕು. ತಪ್ಪಿದಲ್ಲಿ ಸಾರಿಗೆ ನಿಯಮದ ಉಲ್ಲಂಘನೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಲ್ಲೈ ಮುಗಿಲನ್ ಎಚ್ಚರಿಸಿದರು. ಸಂಚಾರದ ವೇಳೆ ಎಲ್ಲ ಬಸ್‌ಗಳಲ್ಲೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಬಾಗಿಲು ಹಾಕಿಕೊಳ್ಳುವುದು ಕಡ್ಡಾಯವಾಗಿದೆ. ಇದರ ಬಗ್ಗೆ ಹಲವು ಬಾರಿ ಸೂಚನೆ ನೀಡಿದರೂ ಪಾಲನೆಯಾಗುತ್ತಿಲ್ಲ. ಹೀಗಾಗಿ ತಕ್ಷಣದಿಂದಲೇ ಬಾಗಿಲು ಅಳವಡಿಸಲು ಎಲ್ಲ ಖಾಸಗಿ ಬಸ್‌ಗಳು ಕ್ರಮ ಕೈಗೊಳ್ಳಬೇಕು. ನಗರ ಸಾರಿಗೆ ಬಸ್‌ಗಳಿಗೆ ಬಾಗಲು ಅಳವಡಿಕೆ ಕುರಿತಂತೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಮಂಗಳೂರು-ಕಾರ್ಕಳ, ಬಜಪೆ-ತಲಪಾಡಿ ಸೇರಿ ದಂತೆ ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆ ನೀಡುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಖಾಸಗಿ ಬಸ್ ಮಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಈಗಾಗಲೇ ಖಾಸಗಿ ಬಸ್ ಮಾಲಕರು ಸೊರಗಿದ್ದಾರೆ. ಹೀಗಾಗಿ ಕೆಎಸ್ಆರ್‌ಟಿಸಿಗೆ ಪರವಾನಿಗೆ ನೀಡದಂತೆ ಮನವಿ ಮಾಡಿದರು. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಖಾಸಗಿ ಬಸ್ ಮಾಲಕರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಬಳಿ 15ದಿನಗಳ ಕಾಲಾವಕಾಶ ನೀಡುವಂತೆ ವಿನಂತಿಸಿದರು. ಸರಕಾರದ ಶಕ್ತಿ ಯೋಜನೆಯನ್ನು ಈ ರೂಟ್‌ಗಳಲ್ಲೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅವಕಾಶ ನೀಡಿ. ಮಾಧ್ಯಮಗಳಲ್ಲೂ ಸಾರ್ವಜನಿಕರು ಬಸ್‌ಗಾಗಿ ಮಾನವಿ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದಿಂದ ವಿವಿಧ ಮಾರ್ಗಗಳಲ್ಲಿ ಈ ಹಿಂದೆ 56 ಸಿಂಗಲ್ ಟ್ರಿಪ್‌ಗಳಿಗೆ ಪರವಾನಿಗೆ ಕೇಳಿತ್ತು. ನ್ಯಾಯಾಲಯದ ತಡೆಯಾಜ್ಞೆಯ ಕಾರಣದಿಂದಾಗಿ ಪರವಾನಿಗೆ ಸಿಕ್ಕಿಲ್ಲ. ಇದೀಗ 8ಟ್ರಿಪ್‌ಗಳ ಬೇಡಿಕೆಯಲ್ಲಿ ಕೇವಲ 3ಟ್ರಿಪ್‌ಗೆ ಅವಕಾಶ ನೀಡಲಾಗಿದೆ. ಕೇಂದ್ರ ಸರಕಾರದ ಏರಿಯಾ ಸ್ಕೀಂ ನಿಯಮದ ಪ್ರಕಾರ ಹಾಗೂ ಚಾಪ್ಟರ್-5ರಂತೆ ಹೊಸ ರೂಟ್ ಪರವಾನಿಗೆ ನೀಡಲು ಸಾರಿಗೆ ಪ್ರಾಧಿಕಾರಕ್ಕೆ ಅಧಿಕಾರ ಇದೆ ಎಂದರು.

    Post Views: 268

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.