Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಖಾಸಗಿ ಬಸ್-ಸ್ಕೂಟರ್‌ ಭೀಕರ ಅಪಘಾತ; ಸವಾರೆ, ಸಹಸವಾರೆಗೆ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಖಾಸಗಿ ಬಸ್-ಸ್ಕೂಟರ್‌ ಭೀಕರ ಅಪಘಾತ; ಸವಾರೆ, ಸಹಸವಾರೆಗೆ ಗಂಭೀರ ಗಾಯ

    November 12, 2024
    Share

    ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169ರ ಮಿಜಾರು ತೋಡಾರಿನಲ್ಲಿರುವ ಇಂಜಿನಿಯರಿಂಗ್ ಕಾಲೇಜೊಂದರ ಸಮೀಪ ನ.11ರ ಬೆಳಗ್ಗೆ ಖಾಸಗಿ ಬಸ್ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸವಾರೆ, ಸಹಸವಾರೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಸ್ಥಳೀಯರು, ವಿದ್ಯಾರ್ಥಿಗಳ ಸಹಿತ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

    ಸ್ಕೂಟರ್ ಸವಾರೆ ಸುಮಿತ್ರಾ ಹಾಗೂ ಸಹಸವಾರೆ ಅವರ ಸಂಬಂಧಿ ಸಾನ್ವಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಪ್ರತಿಭಟನಾಕಾರರು ಸುಮಾರು 3 ಗಂಟೆಗಳ ಕಾಲ ಪ್ರತಿಭಟನೆ ನಡೆದಿದ್ದಾರೆ. ಹೀಗೆ ನಿರ್ಲಕ್ಷ್ಯದಿಂದ ಬಸ್ ಚಲಾಯಿಸುವ ಚಾಲಕರು ಮತ್ತು ಬೇಜವಾಬ್ದಾರಿಯಿಂದ ವರ್ತಿಸುವ ಮಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

    ಘಟನೆ ನಡೆದ ತತ್‌ಕ್ಷಣ ರಿಕ್ಷಾವೊಂದು ಅಲ್ಲಿಗೆ ಬಂದ ಕಾರಣ ಬಸ್ಸಿನ ಚಾಲನೆಗೆ ತಡೆಯೊಡ್ಡಿದಂತಾಗಿ ಹತ್ತಿರವೇ ಇದ್ದ ವಿದ್ಯಾರ್ಥಿಗಳು ಜೀವಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಇನ್ನು ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಚಾಲಕ ಅತಿ ವೇಗದಿಂದ ಚಲಾಯಿಸಿಕೊಂಡು ಬಂದಿದ್ದಾನೆ. ಮೈಟ್ ಕಾಲೇಜಿನ ತಿರುವು ಬಳಿಯಲ್ಲಿ ಬಸ್ ನಿಯಂತ್ರಣ ಕಳೆದುಕೊಂಡಿದ್ದು, ಮೊದಲು ಕಾಲೇಜು ಬಸ್‌ಗೆ ಡಿಕ್ಕಿ ಹೊಡೆದು ಬಳಿಕ ಹೆದ್ದಾರಿ ಬಿಟ್ಟು ಕಾಲೇಜು ರಸ್ತೆಗೆ ನುಗ್ಗಿ ಸ್ಕೂಟರಿಗೆ ಗುದ್ದಿದೆ.

    ಸ್ಥಳಕ್ಕಾಗಮಿಸಿದ ಬಸ್ ಮಾಲಕ ರಫೀಕ್ ಸಂತ್ರಸ್ತರಿಗೆ ವೈಯಕ್ತಿಕ ನೆಲೆಯಲ್ಲಿ 5 ಲಕ್ಷ ರೂ. ಪರಿಹಾರ ನೀಡುತ್ತೇನೆ ಹಾಗೂ ತಪ್ಪಿತಸ್ಥ ಬಸ್ ಚಾಲಕನನ್ನು ಕೆಲಸದಿಂದ ವಜಾಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

    Post Views: 215

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.