Facebook Twitter Instagram
    Tuesday, October 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಆರೋಪ – ಉಪನ್ಯಾಸಕ ದೋಷಮುಕ್ತ ಎಂದ ನ್ಯಾಯಾಲಯ
    ಇತ್ತೀಚಿನ ಸುದ್ದಿ

    ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಆರೋಪ – ಉಪನ್ಯಾಸಕ ದೋಷಮುಕ್ತ ಎಂದ ನ್ಯಾಯಾಲಯ

    November 14, 2024
    Share

    ಮಂಗಳೂರು: ನಗರದ ಕಾಲೇಜೊಂದರ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆಂದು ಆರೋಪ ಎದುರಿಸುತ್ತಿದ್ದ ಕಾಲೇಜಿನ ಉಪನ್ಯಾಸಕರನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತ ಗತಿ ವಿಶೇಷ ನ್ಯಾಯಾಲಯ (ಪೊಕ್ಸೊ) ದೋಷಮುಕ್ತ ಗೊಳಿಸಿದೆ. ‘ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ನೃತ್ಯ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಉಪನ್ಯಾಸಕ ಕಾರ್ತಿಕ್ ನೋಟ್ಸ್ ನೋಡುವ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯನ್ನು ಕರೆಸಿಕೊಂಡಿದ್ದರು. ಬಳಿಕ ದೈಹಿಕ ಶಿಕ್ಷಣ ಕೊಠಡಿಗೆ ಕರೆದೊಯ್ದು ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ನೀಡುವುದಾಗಿ ಆಮಿಷವೊಡ್ಡಿದ್ದಾರೆ‌. ಅಲ್ಲಿ ಬಟ್ಟೆಯನ್ನು ಕಳಚಿ ಅಸ್ವಾಭಾವಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದರು. ಬಳಿಕವೂ ಹಲವು ಬಾರಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದರು’ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿ ದೂರು ನೀಡಿದ್ದ. ಈ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಸಹಾಯಕ ಪೊಲೀಸ್‌ ಆಯುಕ್ತ ಪಿ. ಎ. ಹೆಗಡೆ ಮತ್ತು ಎಸ್.ಮಹೇಶ್ ಕುಮಾ‌ರ್ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದ-ವಿವಾದವನ್ನು ಆಲಿಸಿದೆ. ಈ ವೇಳೆ ಪರೀಕ್ಷೆಯಲ್ಲಿ ಅತ್ಯಂತ ಕಡಿಮೆ ಅಂಕಗಳಿಸಿದ್ದನ್ನು ಹಾಗೂ ಈ ಸಲುವಾಗಿ ಆರೋಪಿ ಉಪನ್ಯಾಸಕರು ಪೋಷಕರನ್ನು ಕಾಲೇಜಿಗೆ ಹಲವು ಬಾರಿ ಕರೆಸಿದ್ದನ್ನು ವಿದ್ಯಾರ್ಥಿಯು ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣಾ ಸಮಯದಲ್ಲಿ ಒಪ್ಪಿಕೊಂಡಿದ್ದ. ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿದ ಪ್ರಕರಣ ಸಂಬಂಧ ಪೋಷಕರನ್ನು ಕಾಲೇಜಿಗೆ ಕರೆಸಿದ್ದನ್ನೂ ಒಪ್ಪಿಕೊಂಡಿದ್ದ. ವಿದ್ಯಾರ್ಥಿಯನ್ನು ಪೊಲೀಸರು ಡ್ರಗ್ಸ್ ಸೇವನೆ ವಿಚಾರವಾಗಿ ವಿಚಾರಣೆ ಮಾಡಿ, ಎಚ್ಚರ ನೀಡಿದ ಕುರಿತು ಕಾಲೇಜಿನ ಪ್ರಾಂಶುಪಾಲರು ನ್ಯಾಯಾಲದಲ್ಲಿ ಹೇಳಿಕೆ ನೀಡಿದ್ದರು. ವಿದ್ಯಾರ್ಥಿ ಡ್ರಗ್ಸ್ ಸೇವನೆ ಮಾಡಿದ ಬಗ್ಗೆ ಆರೋಪಿ ಉಪನ್ಯಾಸಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರ ಹಗೆಯಿಂದ ವಿದ್ಯಾರ್ಥಿಯು ಕತೆ ಕಟ್ಟಿ ಉಪನ್ಯಾಸಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದ’ ಎಂದು ಆರೋಪಿ ಪರ ವಕೀಲರಾದ ರಾಜೇಶ್ ಕುಮಾರ್ ಅಮ್ಮಾಡಿ ವಾದಿಸಿದ್ದರು. ಆರೋಪಿ ಮೇಲಿನ ಆರೋಪ ಸುಳ್ಳು ಎಂದು ನ್ಯಾಯಾಲಯ ಅವರನ್ನು ದೋಷಮುಕ್ತಗೊಳಿಸಿ‌ ಆದೇಶಿಸಿದೆ.

    Post Views: 232

    Related Posts

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.