Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘನೆಗೆ ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್‌ಗೆ 90 ದಿನಗಳ ಕಾರಾಗೃಹ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘನೆಗೆ ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್‌ಗೆ 90 ದಿನಗಳ ಕಾರಾಗೃಹ ಶಿಕ್ಷೆ

    November 26, 2024
    Share

    ಮಂಗಳೂರು: ನ್ಯಾಯಾಲಯವು ಹೊರಡಿಸಿದ ತಾತ್ಕಾಲಿಕ ನಿರ್ಬಂಧಕಾಜ್ಞೆಯ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮಾಡಿರುವ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರಿನ ಸಿವಿಲ್ ನ್ಯಾಯಾಧೀಶ ರಾಮಲಿಂಗಪ್ಪ ಅವರು ತಪ್ಪಿತಸ್ಥ ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್‌ರಿಗೆ 90ದಿನಗಳ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಶ್ರೀವಿಠೋಬ ರುಕುಮಾಯಿ ದೇವರ ಭಂಡಾರದ ದಿನನಿತ್ಯದ ಆಡಳಿತಾತ್ಮಕ ವ್ಯವಹಾರದಲ್ಲಿ ಹಸ್ತಕ್ಷೇಪಮಾಡಬಾರದು. ಟ್ರಸ್ಟಿ ಎಂದು ತನ್ನನ್ನು ತಾನು ಪ್ರತಿಪಾದಿಸಬಾರದು ಎಂದು ಹನುಮಂತ ಕಾಮತ್ ಎಂಬವರ ವಿರುದ್ಧ ತಾತ್ಕಾಲಿಕ ನಿರ್ಬಂಧಕಾಜ್ಞೆ ಕೋರಿ ದೇವರ ಭಂಡಾರದ ಟ್ರಸ್ಟಿ ಎಂ ವರದಾಯ ಪ್ರಭು ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ಹನುಮಂತ ಕಾಮತ್ ವಿರುದ್ಧ ತಾತ್ಕಾಲಿಕ ನಿರ್ಬಂಧಕಾಜ್ಞೆಯ ಆದೇಶವನ್ನು ಹೊರಡಿಸಿತ್ತು. ಸದರಿ ಆದೇಶದ ವಿರುದ್ಧ ಹನುಮಂತ ಕಾಮತ್ ಸಲ್ಲಿಸಿದ ಮೇಲ್ಮನವಿ ತಿರಸ್ಕೃತವಾಗಿತ್ತು. ಬಳಿಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ಯಾವುದೇ ತಡೆಯಾಜ್ಞೆಯನ್ನು ಹೈಕೋರ್ಟ್ ನೀಡಿಲ್ಲ. ಆದರೆ ಹನುಮಂತ ಕಾಮತ್ ನ್ಯಾಯಾಲಯದ ಆದೇಶ ಉಲ್ಲಂಘಿಸಿ ತಾನೇ ಭಂಡಾರದ ಟ್ರಸ್ಟಿ ಎಂದು ಘೋಷಣೆ ಮಾಡಿಕೊಂಡು ದಿನನಿತ್ಯದ ವ್ಯವಹಾರದಲ್ಲಿ ಭಾಗವಹಿಸುತ್ತಿದ್ದರು. 2018ರ ಮಾರ್ಚ್ 30ರಂದು ತುಳುನಾಡು ಸುದ್ದಿ ಪತ್ರಿಕೆಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿ ತಾನೇ ಟ್ರಸ್ಟಿ ಎಂದು ಹೇಳಿಕೊಂಡಿದ್ದರು. ಹನುಮಂತ ಕಾಮತ್ ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿ ಎಂದು ಕೋರಿ ಎಂ.ವರದಾಯ ಪ್ರಭು ನ್ಯಾಯಾಂಗ ನಿಂದನಾ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಹನುಮಂತ ಕಾಮತ್ ಉದ್ದೇಶಪೂರ್ವಕವಾಗಿ ತಾತ್ಕಾಲಿಕ ನಿರ್ಬಂಧಕಾಜ್ಞೆ ಆದೇಶವನ್ನು ಉಲ್ಲಂಘಿಸಿದ್ದಾರೆ.‌ ಆದ್ದರಿಂದ ತಪ್ಪಿತಸ್ಥರೆಂದು ನಿರ್ಣಯಿಸಿ ಹನುಮಂತ ಕಾಮತ್ ಅವರು 90 ದಿನಗಳವರೆಗೆ ಸಿವಿಲ್ ಬಂಧೀಖಾನೆಗೆ ಒಳಪಡಲು ಬಾದ್ಯಸ್ಥರಾಗಿರುತ್ತಾರೆ ಎಂದು ನ್ಯಾಯಾಲಯ ಆದೇಶಿಸಿದೆ. ಅರ್ಜಿದಾರರ ಪರವಾಗಿ ಹಿರಿಯ ನ್ಯಾಯವಾದಿ ಪಿ. ರಂಜನ್ ರಾವ್ ವಾದಿಸಿದರು.

    Post Views: 495

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.