Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ವಿಟ್ಲ: ಆಟೋ ಹಾಗೂ ಬೈಕ್ ಮಧ್ಯೆ ಅಪಘಾತ : ಮೂವರಿಗೆ ಗಂಭೀರ ಗಾಯ…!!
    Uncategorized

    ವಿಟ್ಲ: ಆಟೋ ಹಾಗೂ ಬೈಕ್ ಮಧ್ಯೆ ಅಪಘಾತ : ಮೂವರಿಗೆ ಗಂಭೀರ ಗಾಯ…!!

    November 27, 2024
    Share

    ವಿಟ್ಲ:  ಆಟೋರಿಕ್ಷಾ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸಾಲೆತ್ತೂರು ಸಮೀಪದ ಕಾಡುಮಠ ಸೇತುವೆ ಬಳಿ ನಡೆದಿದೆ.

    ಆಟೋ ಚಾಲಕ ಸಾಲೆತ್ತೂರು ನಿವಾಸಿ ರಫೀಕ್, ಬೈಕ್ ಸವಾರರಾದ ಕಡಂಬು ನಿವಾಸಿ ಉಮ್ಮರ್ ಮತ್ತು ರಾದುಕಟ್ಟೆ ನಿವಾಸಿ ಅಬೂಬಕ್ಕರ್ ಗಾಯಾಳುಗಳು ಎಂದು ತಿಳಿಯಲಾಗಿದೆ.

    ಸುಂಕದಕಟ್ಟೆ ಮಜೀರ್ ಪಳ್ಳದಲ್ಲಿ ಸೆಂಟ್ರಿಂಗ್ ಕೆಲಸ ಮುಗಿಸಿ ಮನೆಗೆ ಹಿಂತಿರುತ್ತಿದ್ದ ಉಮ್ಮರ್ ಮತ್ತು ಅಬೂಬಕ್ಕರ್ ಅವರ ಬೈಕ್ ಸಾಲೆತ್ತೂರು ಕಡೆಗೆ ಸಂಚರಿಸುತ್ತಿದ್ದ ರಫೀಕ್ ಎಂಬವರ ಆಟೋಗೆ ಕಾಡುಮಠ ಸೇತುವೆಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ.

    ಅಪಘಾತದ ತೀವ್ರತೆಗೆ ಆಟೋ ಮತ್ತು ಬೈಕ್ ಸಂಪೂರ್ಣ ಜಖಂಗೊಂಡು ಮೂವರೂ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳ ಪೈಕಿ ಅಬೂಬಕ್ಕರ್ ಅವರ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

    ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 157

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.