Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ನಕಲಿ ಇ-ಚಲನ್ ಕಳುಹಿಸಿ ವಂಚನೆ – ದೂರು ದಾಖಲು !
    ಇತ್ತೀಚಿನ ಸುದ್ದಿ

    ಮಂಗಳೂರು : ನಕಲಿ ಇ-ಚಲನ್ ಕಳುಹಿಸಿ ವಂಚನೆ – ದೂರು ದಾಖಲು !

    November 27, 2024
    Share

    ಮಂಗಳೂರು : ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ನಕಲಿ ಇ ಚಲನ್ ಕಳುಹಿಸಿ ವ್ಯಕ್ತಿಯೊಬ್ಬರ ಖಾತೆಯಿಂದ 1.31 ಲಕ್ಷ ರೂ. ಗಳನ್ನು ವರ್ಗಾಯಿಸಿಕೊಂಡ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನ.24ರಂದು ತನಗೆ ವಾಟ್ಸಾಪ್ ನಂಬರ್‌ ವೊಂದರಿಂದ ಮೆಸೇಜ್ ಬಂದಿದ್ದು, ಅದನ್ನು ಡೌನ್‌ಲೋಡ್ ಮಾಡಿದಾಗ ಮೊಬೈಲ್‌ ಗೆ 16 ಒಟಿಪಿಗಳು ಬಂದಿದ್ದವು. ಬಳಿಕ ಪ್ಲಿಪ್‌ ಕಾರ್ಟ್ ಹಾಗೂ ಅಮೇಜಾನ್ ನಲ್ಲಿ ತನ್ನ ಕ್ರೆಡಿಟ್ ಕಾರ್ಡ್ ಮೂಲಕ 30,400 ರೂ., ಡೆಬಿಟ್ ಕಾರ್ಡ್ ಮೂಲಕ 16,700 ರೂ. ಮತ್ತು ಪೇ ಲೇಟರ್ ನಲ್ಲಿ 71,496 ರೂ. ಹಣ ವರ್ಗಾವಣೆಯಾದ ಬಗ್ಗೆ ಮೊಬೈಲ್‌ಗೆ ಮೆಸೇಜ್ ಬಂತು. ತಕ್ಷಣ ಮೊಬೈಲ್‌ ಮೂಲಕ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್‌ ನ್ನು ಬ್ಲಾಕ್ ಮಾಡಿದೆ. ಯಾರೋ ಅಪರಿಚಿತರು ಎಪಿಕೆ ಫೈಲ್ ಮೂಲಕ ತನ್ನ ಡೆಬಿಟ್, ಕ್ರೆಡಿಟ್ ಕಾರ್ಡ್‌ನ ಮಾಹಿತಿ ಪಡೆದು ಪ್ಲಿಪ್‌ಕಾರ್ಟ್ ನಲ್ಲಿ 39,398 ರೂ. ಮೌಲ್ಯದ ಒನ್ ಪ್ಲಸ್ ಮೊಬೈಲ್, 32,398 ರೂ. ಮೌಲ್ಯದ ಮೊಟೊರೊಲಾ ಎಜ್ ಮೊಬೈಲ್, 12,800 ರೂ. ಮೌಲ್ಯದ ಏರ್ ಪೋಡ್, 14,700 ರೂ, 29,400 ರೂ., 3,000 ರೂ ಹೊಸದಿಲ್ಲಿಯ ವಿಳಾಸದಲ್ಲಿರುವ ವ್ಯಕ್ತಿಗೆ ಆರ್ಡರ್ ಮಾಡಿ 1,31,396 ರೂ. ವಂಚಿಸಿದ್ದಾರೆ ಎಂದು ಹಣ ಕಳಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.

    Post Views: 166

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.